

Tragedy: ಮಧ್ಯಪ್ರದೇಶದ ಇಂದೋರ್‌ನಲ್ಲಿ ಕೋಚಿಂಗ್ ಸೆಂಟರ್ ನಲ್ಲಿ ಹೃದಯಾಘಾತದಿಂದ (Heart attack)ಕುಸಿದು ಬಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ (Death)ಘಟನೆ ಬುಧವಾರ ನಡೆದಿದೆ.
ಮಧ್ಯಪ್ರದೇಶ ಲೋಕಸೇವಾ ಆಯೋಗದ (MPCC)ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುವ ನಿಟ್ಟಿನಲ್ಲಿ ನಗರದ ಭನ್ವಾರ್ಕುವಾನ್ ಪ್ರದೇಶದ ನಿವಾಸಿ ಮಾಧವ್ (18) ಹಲವೆಡೆ ಕೋಚಿಂಗ್ ನೀಡಲಾಗುತ್ತಿದೆ. ವಿದ್ಯಾರ್ಥಿಯೋರ್ವ ಕೋಚಿಂಗ್ ಸೆಂಟರ್ ನಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ.
ಈ ಘಟನೆಯ ವಿಡಿಯೋ ತರಗತಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕುಸಿದು ಬಿದ್ದ ಯುವಕನನ್ನು ಗೆಳೆಯರು ಆಸ್ಪತ್ರೆಗೆ ಕರೆದೊಯ್ದರು ಕೂಡ ಅಷ್ಟರಲ್ಲಿ ಆತ ಕೊನೆಯುಸಿರೆಳೆದಿದ್ದಾನೆ.












