Home latest Tumakuru News:14 ರ ಬಾಲೆ ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲು; ಮಗು ಜೊತೆ ಹೊರ ಬಂದ ಪೋರಿ!!!

Tumakuru News:14 ರ ಬಾಲೆ ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲು; ಮಗು ಜೊತೆ ಹೊರ ಬಂದ ಪೋರಿ!!!

Hindu neighbor gifts plot of land

Hindu neighbour gifts land to Muslim journalist

Tumakuru Crime news: ತುಮಕೂರು ಜಿಲ್ಲೆಯ(Tumakuru Crime news) ಮಧುಗಿರಿ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ನಲ್ಲಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೊಟ್ಟೆ ನೋವೆಂದು (Stomach Pain)ಆಸ್ಪತ್ರೆಗೆ ಭೇಟಿ ನೀಡಿದ್ದಾಳೆ. ಆದರೆ ಆಸ್ಪತ್ರೆಗೆ ದಾಖಲಾದ ಬಳಿಕ ನಡೆದ ಘಟನೆಗಳಿಂದ ಪೋಷಕರು ಆಘಾತಕ್ಕೀಡಾಗಿದ್ದಾರೆ(Shocking news).

 

ಬಾಗೇಪಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬಾಲಕಿ ಮೂರು ದಿನಗಳ ಹಿಂದಷ್ಟೇ ಹೊಟ್ಟೆನೋವು ಎಂದು ತನ್ನ ತಾಯಿಯ ಜೊತೆಗೆ ಬಂದು ಚುಚ್ಚುಮದ್ದು ಹಾಕಿಸಿಕೊಂಡು ಹೋಗಿದ್ದಾಳೆ. ಕೆಲ ಸಮಯದ ನಂತರ ಮತ್ತೆ ಹೊಟ್ಟೆನೋವು ಎಂದು ಆಸ್ಪತ್ರೆಗೆ ಬಂದಿದ್ದು, ಆಗ ಚಿಕಿತ್ಸೆ ನೀಡಿದಾಗ ಕೆಲ ಸಮಯದಲ್ಲೇ ಆ ಬಾಲಕಿಗೆ ಹೆರಿಗೆಯಾಗಿ 2.2 ಕೆಜಿ ಇರುವ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ (14-Year-Old Girl Gives Birth to a Baby Boy at a Hostel in Madhugiri)ಎನ್ನಲಾಗಿದೆ.

 

ಶಾಲಾ ಬಾಲಕಿ ಗರ್ಭಿಣಿಯಾಗಿ, ಮಗುವಿಗೆ ಹೆರಿಗೆಯಾಗುವವರೆಗೂ ಆಕೆಯ ಪೋಷಕರಿಗೆ, ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ, ಶಾಲಾ ಶಿಕ್ಷಕರು ಬಾಲಕಿಯ ದೇಹದಲ್ಲಾಗುತ್ತಿರುವ ಬದಲಾವಣೆ ಗೋಚರಿಸಲಿಲ್ಲವೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಿಗೂ ಕಾಡುತ್ತದೆ. ಬಾಲಕಿಯನ್ನು ಹೆಚ್ಚಿನ ಆರೈಕೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಕೃತ್ಯ ಎಸಗಿದ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.