Home latest ಉಪ್ಪಿನಂಗಡಿ: ತಂದೆಯಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!!

ಉಪ್ಪಿನಂಗಡಿ: ತಂದೆಯಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!!

Hindu neighbor gifts plot of land

Hindu neighbour gifts land to Muslim journalist

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ತಂದೆಯೇ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪ್ರಕರಣವೊಂದು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿದ್ದು, ದೌರ್ಜನ್ಯಕ್ಕೊಳಗಾದ ಬಾಲಕಿ ಐದು ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಮೂಲಗಳು ಸ್ಪಷ್ಟಪಡಿಸುತ್ತಲೇ ಪೋಕ್ಸೋ ಕಾಯಿದೆಯಡಿ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಠಾಣಾ ವ್ಯಾಪ್ತಿಯ ಗೋಳಿತೊಟ್ಟು ಮನಿಪುಲ ನಿವಾಸಿ ಚಂದಪ್ಪ ನಾಯ್ಕ ಎಂದು ಗುರುತಿಸಲಾಗಿದೆ.

ಕಳೆದ ಮಾರ್ಚ್ ತಿಂಗಳಿನಲ್ಲಿ ಬಾಲಕಿಯ ಸಹೋದರಿ ಸಹಿತ ತಾಯಿ ಸಂಬಂಧಿಕರ ಮನೆಗೆ ತೆರಳಿದ್ದು, ಪರೀಕ್ಷೆಗೆ ಓದಿಕೊಳ್ಳುವ ಕಾರಣಕ್ಕಾಗಿ ಬಾಲಕಿ ದೌರ್ಜನ್ಯಕ್ಕೊಳಗಾದ ಬಾಲಕಿ ಮನೆಯಲ್ಲೇ ಉಳಿದುಕೊಂಡಿದ್ದಳು. ಈ ವೇಳೆ ಆರೋಪಿ ತಂದೆ ಆಕೆಯನ್ನು ಬಲವಂತವಾಗಿ ಅತ್ಯಾಚಾರ ಎಸಗಿದ್ದು, ಕೃತ್ಯದ ಬಳಿಕ ವಿಚಾರವನ್ನು ಹೊರಗೆ ಹೇಳಿಕೊಂಡಲ್ಲಿ ನೇಣು ಹಾಕಿಕೊಂಡು ಸಾಯುವುದಾಗಿ ಹೆದರಿಸಿದ್ದಾನೆ ಎನ್ನಲಾಗಿದೆ.

ಆ ಬಳಿಕ ಅದೇ ಕಾರಣ ಹೇಳುತ್ತಾ ಅವಕಾಶ ಸಿಕ್ಕಾಗಲೆಲ್ಲಾ ಆಕೆಯ ಮೇಲೆ ನಿರಂತವಾಗಿ ಅತ್ಯಾಚಾರ ಎಸಗಿದ್ದ. ಕಳೆದ ಕೆಲ ದಿನಗಳ ಹಿಂದೆ ಆಕೆಯ ಆರೋಗ್ಯದಲ್ಲಿ ಏರುಪೇರಾದ ಪರಿಣಾಮ ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಐದು ತಿಂಗಳ ಗರ್ಭಿಣಿ ಎನ್ನುವುದು ಬೆಳಕಿಗೆ ಬಂದಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಲಾಗಿದೆ.