ಸೋಮವಾರ, 26 ಅಕ್ಟೋಬರ್ 2026
Trending

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್ – ಯಾರ ಜೊತೆ ಮೈತ್ರಿ ಗೊತ್ತಾ?

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ತಮಿಳುನಾಡಿನಲ್ಲಿ ಯಾರು ನಿರೀಕ್ಷಿಸದ ರಿಸಲ್ಟ್ ಬಂದಿರುವುದು ರಾಜಕೀಯದ ದಿಕ್ಕನ್ನೇ ಬದಲಿಸಿದೆ. ಕಾರಣ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮೊದಲ ಭಾರಿಯೇ 108 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದೀಗ ವಿಜಯ್ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ ಎಂದು ತಿಳಿದು ಬಂದಿದೆ.

Sponsored

ತಮಿಳುನಾಡು ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ 108 ಸ್ಥಾನಗಳನ್ನು ಗಳಿಸಿದ್ದು, ಡಿಎಂಕೆ 71 ಸ್ಥಾನಗಳನ್ನು ಮತ್ತು ಎಐಎಡಿಎಂಕೆ 57 ಸ್ಥಾನಗಳನ್ನು ಗಳಿಸಿ ಮೂರನೇ ಸ್ಥಾನದಲ್ಲಿದೆ. ತಮಿಳುನಾಡು ವಿಧಾನಸಭೆಯಲ್ಲಿ ಒಟ್ಟು 234 ಸ್ಥಾನಗಳಿವೆ. ಮ್ಯಾಜಿಕ್ ನಂಬರ್ 118 ಆಗಿದೆ. ಚೊಚ್ಚಲ ಚುನಾವಣೆಯಲ್ಲೇ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದ್ರೆ ಬಹುಮತಕ್ಕೆ 118 ಸ್ಥಾನಗಳು ಬೇಕಿದ್ದು, 10 ಸ್ಥಾನಗಳ ಕೊರತೆಯಿದೆ. ಹೀಗಿದ್ದರೂ ಟಿವಿಕೆ ಸರ್ಕಾರ (TVK Government) ರಚನೆಗೆ ಹಕ್ಕು ಮಂಡಿಸಿದೆ ಎನ್ನಲಾಗ್ತಿದೆ. ಹೀಗಾಗಿ ಮೈತ್ರಿ ಕುರಿತ ಚರ್ಚೆಗಳು ಜೋರಾಗಿ ನಡೆಯುತ್ತಿದೆ.

Advertisement
Advertisement

ಟಿವಿಕೆ ಮುಖ್ಯಸ್ಥ ವಿಜಯ್, ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಪತ್ರ ಬರೆದು ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರನ್ನು ಆಹ್ವಾನಿಸುವಂತೆ ರಾಜಭವನಕ್ಕೆ ಮನವಿ ಮಾಡಿದ್ದಾರೆ. ಜೊತೆಗೆ 2 ವಾರಗಳಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಹೇಳಿದ್ದಾರೆ. 

ಬಹುಮತ ಸಾಬೀತಿಗೆ ಇನ್ನು 10 ಶಾಸಕರ ಬೆಂಬಲದ ಅಗತ್ಯವಿರುವುದರಿಂದ, ಟಿವಿಕೆ ಪಕ್ಷವು ಇದೀಗ ಸಣ್ಣ ಪಕ್ಷಗಳತ್ತ ಮುಖಮಾಡಿದೆ. ಪ್ರಸ್ತುತ ಚುನಾವಣೆಯಲ್ಲಿ ಕಾಂಗ್ರೆಸ್ 5, ಪಿಎಂಕೆ 4, ಎಡಪಕ್ಷಗಳು 4 ಹಾಗೂ ವಿಸಿಕೆ 2 ಸ್ಥಾನಗಳನ್ನು ಗೆದ್ದುಕೊಂಡಿವೆ. ವಿಜಯ್ ಅವರು ಈ ಪಕ್ಷಗಳೊಂದಿಗೆ ಮೈತ್ರಿಗೆ ಮುಂದಾಗುವ ಸಾಧ್ಯತೆಯಿದ್ದು, ಸರ್ಕಾರ ರಚನೆಯ ಕೀಲಿ ಕೈ ಈಗ ಈ ಸಣ್ಣ ಪಕ್ಷಗಳ ಕೈಯಲ್ಲಿದೆ. ಮೈತ್ರಿ ವಿಚಾರವಾಗಿ ಶೀಘ್ರದಲ್ಲೇ ನಿರ್ಧಾರ ಪ್ರಕಟಿಸುವುದಾಗಿ ಕಾಂಗ್ರೆಸ್ ನಾಯಕರು ಕೂಡ ಸುಳಿವು ನೀಡಿದ್ದಾರೆ.

Advertisement