ಭಾನುವಾರ, 25 ಅಕ್ಟೋಬರ್ 2026
Trending

LPG: ಸಿಲಿಂಡರ್ ಬುಕ್ ಮಾಡಲು ಕೇಂದ್ರದಿಂದ ಹೊಸ ಮಾರ್ಗ ಸೂಚಿ ಬಿಡುಗಡೆ – ಇನ್ಮುಂದೆ 25 ದಿನ ಕಾಯಬೇಕು!!

LPG: ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿದ್ದು, ದೇಶದಲ್ಲಿ ಅಡುಗೆ ಅನಿಲ, ಇಂಧನ ಪೂರೈಕೆಗೆ ಅಡಚಣೆ ಎದುರಾಗುವ ಭೀತಿ ಮೂಡಿದೆ. ಈ ಮಧ್ಯೆ ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಮೋಸದಾಟವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಬುಕಿಂಗ್‌ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಿದೆ. 

Sponsored

ಅಕ್ರಮ ದಾಸ್ತಾನು ಮತ್ತು ಕಾಳಸಂತೆಯನ್ನು ತಡೆಯಲು LPG ಸಿಲಿಂಡರ್ ಗಳ ಬುಕಿಂಗ್ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಈ ಹಿಂದೆ 55 ದಿನಗಳಿಗೊಮ್ಮೆ LPG ಸಿಲಿಂಡರ್ ಗಳನ್ನು ಬುಕ್ ಮಾಡಿದವರೂ ಈಗ 15 ದಿನಗಳಲ್ಲಿ ಸಿಲಿಂಡರ್ ಗಳನ್ನು ಬುಕ್ ಮಾಡಲು ಆರಂಭಿಸಿರುವ ನಿದರ್ಶನಗಳು ಬೆಳಕಿಗೆ ಬಂದಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

25 ದಿನದ ಬಳಿಕವೇ ಮತ್ತೊಂದು ಸಿಲಿಂಡರ್‌

ಒಂದು ಸಿಲಿಂಡರ್‌ ಬುಕಿಂಗ್‌ ಮಾಡಿದ 25 ದಿನಗಳ ನಂತರವಷ್ಟೇ ಮತ್ತೊಂದು ಬುಕಿಂಗ್‌ಗೆ ಅವಕಾಶ ಕಲ್ಪಿಸಿದೆ. ಬಿಕ್ಕಟ್ಟಿಗೆ ಮುನ್ನ ಸಿಲಿಂಡರ್‌ ಬುಕಿಂಗ್‌ ಅಂತರ 15 ದಿನಗಳಷ್ಟಿತ್ತು. 2 ದಿನಗಳ ಹಿಂದೆ ಇದನ್ನು 21 ದಿನಗಳಿಗೆ ಹೆಚ್ಚಿಸಲಾಗಿತ್ತು. ಈಗ ಮತ್ತಷ್ಟು ದಿನ ಹೆಚ್ಚು ಕಾಯಬೇಕಿದೆ.

ಅಲ್ಲದೆ ವಾಣಿಜ್ಯ ಬಳಕೆಯ (Commercial) ಸಿಲಿಂಡರ್‌ಗಳಿಗಿಂತ ಮನೆ ಬಳಕೆಯ (Domestic) ಗ್ರಾಹಕರಿಗೆ ಮೊದಲ ಆದ್ಯತೆ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. ‘ಮನೆ ಬಳಕೆಯ ಗ್ರಾಹಕರ ಹಿತವೇ ನಮಗೆ ಮುಖ್ಯ’ ಎಂದು ಸರ್ಕಾರ ಸ್ಪಷ್ಟಪಡಿಸಿದೆ.