Home Latest Health Updates Kannada ಭಾವನಾತ್ಮಕ ಪತ್ರ ಬರೆದ ಯಶ್| ಅಭಿಮಾನಿಗಳಿಗೆ ಆಯ್ತು ನಿರಾಶೆ| ಅಂತದ್ದೇನಿದೆ ಆ ಪತ್ರದಲ್ಲಿ ಗೊತ್ತ!

ಭಾವನಾತ್ಮಕ ಪತ್ರ ಬರೆದ ಯಶ್| ಅಭಿಮಾನಿಗಳಿಗೆ ಆಯ್ತು ನಿರಾಶೆ| ಅಂತದ್ದೇನಿದೆ ಆ ಪತ್ರದಲ್ಲಿ ಗೊತ್ತ!

Hindu neighbor gifts plot of land

Hindu neighbour gifts land to Muslim journalist

ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಹುಟ್ಟಹಬ್ಬಕ್ಕೆ ಇನ್ನೇನು ಎರಡೇ ದಿನ ಬಾಕಿ ಇದೆ. ಕಳೆದೆರಡು ವರ್ಷಗಳಲ್ಲಿ ಕೊರೋನ ಹಿನ್ನೆಲೆಯಲ್ಲಿ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಲಾಗಿತ್ತು. ಆದರೆ ಈ ಬಾರಿ ಅಭಿಮಾನಿಗಳೆಲ್ಲರೂ ಅದ್ದೂರಿಯಾಗಿ ಯಶ್ ಬರ್ತ್ ಡೇ ಸೆಲಬ್ರೇಟ್ ಮಾಡಿ ಸಂಭ್ರಮಿಸಲು ಕಾತುರರಾಗಿದ್ದಾರೆ. ಆದರೆ ಇದಕ್ಕೂ ಮುಂಚಿತವಾಗಿ ಯಶ್ ತಮ್ಮ ಅಭಿಮಾನಿಗಳಿಗೆ ಭಾವನಾತ್ಮಕವಾಗಿ ಒಂದು ಪತ್ರ ಒಂದನ್ನು ಬರೆದಿದ್ದಾರೆ. ಹಾಗಾದರೆ ಆ ಪತ್ರದಲ್ಲೇನಿದೆ ಗೊತ್ತಾ?

ಈ ವರ್ಷ ಯಶ್ ಗೆ ಅಭಿಮಾನಿಗಳ ಜೊತೆ ಬರ್ತ್ ಡೇ ಆಚರಿಸಿಕೊಳ್ಳಲು ಆಗುವುದಿಲ್ಲವಂತೆ. ಹೌದು, ಹೀಗಂತ ಯಶ್ ಅವರೇ ತಮ್ಮ ಅಭಿಮಾನಿಗಳಿಗೆ ಬರೆದ ಪತ್ರದಲ್ಲಿ ತಮ್ಮ ಭಾವನಾತ್ಮಕ ನುಡಿಗಳಲ್ಲಿ ತಿಳಿಸಿದ್ದಾರೆ. ಅಲ್ಲದೆ ಯಶ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್​ ಕೂಡ ಆಗುವುದಿಲ್ಲವಂತೆ. ಯಶ್​ ಬರ್ತ್​ಡೇ ದಿನ ಹೊಸ ಸಿನಿಮಾ ಅನೌನ್ಸ್​ ಆಗುತ್ತೆ ಅಂತ ಕಾಯ್ತಿದ್ದ ಅಭಿಮಾನಿಗಳು ಇದೀಗ ಮತ್ತಷ್ಟು ದಿನ ಕಾಯಲೇಬೇಕಾಗುತ್ತದೆ.

ಯಶ್, ತಮ್ಮ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದು ಪ್ರತಿವರ್ಷದಂತೆ ಅಭಿಮಾನಿಗಳ ಜೊತೆ ತನ್ನ ಹುಟ್ಟು ಹಬ್ಬ ಆಚರಿಸಬೇಕು, ಕೆಲವು ಸಮಯ ಅವರೊಂದಿಗೆ ಕಳೆಯಬೇಕು ಎಂಬ ಆಶೆ ನನಗೂ ಇತ್ತು. ಆದರೆ ಕೆಲವು ಕಾರಣಾಂತರಗಳಿಂದ ಈ ಬಾರಿಯ ಹುಟ್ಟಿದ ಹಬ್ಬದ ಆಚರಣೆಯಲ್ಲಿ ಭಾಗವಹಿಸಲು ನನಗೆ ಸಾಧ್ಯ ಆಗುತ್ತಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಅಭಿಮಾನಿಗಳಿಗಾಗಿ ಹೊಸತೇನೋ ಒಂದನ್ನು ಕೈಗೆತ್ತಿಕೊಂಡಿದ್ದು ಸದ್ಯ ಅದರ ಕೆಲಸದಲ್ಲಿ ತೊಡಗಿದ್ದೇನೆ, ಅಲ್ಲಿಯವರೆಗಿನ ನಿಮ್ಮ ತಾಳ್ಮೆ ಹಾಗೂ ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ಉಡುಗೊರೆ ಎಂದು ಮನವಿ ಮಾಡಿದ್ದಾರೆ. ಇದರಿಂದ ಅಭಿಮಾನಿಗಳಿಗೆ ನಿರಾಶೆಯೂ ಉಂಟಾಗಿದೆ.

ಯಶ್ ಅವರು ‘ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ. ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ, ನನ್ನ ಹೃದಯ ತುಂಬುವಂತೆ ಮಾಡಿದೆ. ನನಗೆ ಗೊತ್ತು ನೀವೆಲ್ಲಾ ಕಾಯುತ್ತಿದ್ದೀರಾ. ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದೆ ಇತ್ತೀಚಿನ ವರ್ಷಗಳಲ್ಲಿ. ಯಾವಾಗ ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸಿ ವಿಜೃಂಭಿಸೋಕೆ ಶುರು ಮಾಡಿದ್ದರಿಂದ. ಹಾಗಾಗಿ ನಾನು ಕೂಡ ಈ ವರ್ಷದ ಹುಟ್ಟುಹಬ್ಬದಂದು ನಿಮ್ಮನ್ನ ನೋಡಬೇಕು. ನಿಮ್ಮೊಂದಿಗೆ ಸಮಯ ಕಳೆಯಬೇಕು ಅಂದುಕೊಂಡಿದ್ದೆ. ಆದರೆ ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ.

ನಿಮಗಾಗಿ ವಿಭಿನ್ನವಾಗಿರೋದೆನನ್ನೂ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ನಿಮ್ಮ ಉಡುಗೊರೆ. ಕ್ಷಮಿಸಿ ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ ಆದಷ್ಟು ಬೇಗ ನಿಮಗೆ ಸಿಗುತ್ತೇನೆ ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ. ನಿಮ್ಮ ಪ್ರೀತಿಯ ಯಶ್’ ಎಂದು ಅಭಿಮಾನಿಗಳಿಗೆ ಪತ್ರ ಸಂದೇಶ ನೀಡಿದ್ದಾರೆ.