Home Karnataka State Politics Updates Supreme Court:ದೆಹಲಿ ಮುಖ್ಯ ಕಾರ್ಯದರ್ಶಿ ಆಯ್ಕೆ ವಿಚಾರ- ಕೇಂದ್ರಕ್ಕೆ ಖಡಕ್ ಸೂಚನೆ ಕೊಟ್ಟ ಸುಪ್ರೀಂ !!

Supreme Court:ದೆಹಲಿ ಮುಖ್ಯ ಕಾರ್ಯದರ್ಶಿ ಆಯ್ಕೆ ವಿಚಾರ- ಕೇಂದ್ರಕ್ಕೆ ಖಡಕ್ ಸೂಚನೆ ಕೊಟ್ಟ ಸುಪ್ರೀಂ !!

Hindu neighbor gifts plot of land

Hindu neighbour gifts land to Muslim journalist

Supreme Court to Delhi: ದೆಹಲಿ (Delhi)ಸರ್ಕಾರವನ್ನು ಸಂಪರ್ಕಿಸದೆ ಮುಖ್ಯ ಕಾರ್ಯದರ್ಶಿಯನ್ನು ನೇಮಿಸುವ ಇಲ್ಲವೇ ಪ್ರಸ್ತುತ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಕೇಂದ್ರದ ಕ್ರಮದ ವಿರುದ್ಧ ದೆಹಲಿ ಸರ್ಕಾರ ಕೋರ್ಟ್ ಮೆಟ್ಟಿಲೇರಿದೆ. ನರೇಶ್ ಕುಮಾರ್ ಅವರು ನವೆಂಬರ್ 30 ರಂದು ನಿವೃತ್ತರಾಗಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತನ್ನನ್ನು ಸಂಪರ್ಕಿಸದೆ ಮುಖ್ಯ ಕಾರ್ಯದರ್ಶಿ ನೇಮಕ ಪ್ರಕ್ರಿಯೆಯನ್ನು ಹೇಗೆ ವಿಸ್ತರಿಸಬಹುದು ಎಂದು ಪ್ರಶ್ನೆ ಮಾಡಲಾಗಿದೆ.

ದೆಹಲಿ ಸರ್ಕಾರದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ನಡೆಸುತ್ತಿದೆ. ಸುಪ್ರೀಂ ಕೋರ್ಟ್(Supreme court)ದೆಹಲಿಯ ನೂತನ ಮುಖ್ಯ ಕಾರ್ಯದರ್ಶಿ ನೇಮಕಕ್ಕೆ ನವೆಂಬರ್ 28 ರಂದು ಬೆಳಿಗ್ಗೆ 10.30 ರೊಳಗೆ ಐವರು ಹಿರಿಯ ಅಧಿಕಾರಿಗಳ ಹೆಸರನ್ನು ಸೂಚಿಸುವಂತೆ ಶುಕ್ರವಾರ ಕೇಂದ್ರಕ್ಕೆ ಸೂಚನೆ ನೀಡಿದೆ(Supreme Court to Delhi ). ಈ ಸಂಕೀರ್ಣ ವಿಷಯದ ಬಗ್ಗೆ ತೀರ್ಪು ನೀಡಲು ದೆಹಲಿ ಸರ್ಕಾರ ಆ ದಿನವೇ ಪ್ರತಿಕ್ರಿಯೆ ನೀಡಬೇಕಾಗುತ್ತದೆ ಎಂದು ಕೂಡ ನ್ಯಾಯಾಲಯ ಹೇಳಿದೆ.

ಮುಖ್ಯ ಕಾರ್ಯದರ್ಶಿ ನೇಮಕಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಮತ್ತು ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ವಿಕೆ ಸಕ್ಸೇನಾ ನೇತೃತ್ವದ ದೆಹಲಿ ಸರ್ಕಾರದ ನಡುವೆ ಮತ್ತೊಂದು ಘರ್ಷಣೆ ನಡೆದಿದೆ ಎನ್ನಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಮತ್ತು ಮುಖ್ಯಮಂತ್ರಿ ಕೇಜ್ರಿವಾಲ್ ಏಕೆ ಒಟ್ಟಿಗೆ ಭೇಟಿಯಾಗಲು ಮತ್ತು ಹುದ್ದೆಯ ಹೆಸರನ್ನು ಸೌಹಾರ್ದಯುತವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಪ್ರಶ್ನೆ ಮಾಡಿದೆ.

ದೆಹಲಿ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಡಿಇಆರ್‌ಸಿ) ಹೊಸ ಮುಖ್ಯಸ್ಥರ ನೇಮಕಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳ ನಡುವೆ ಕೂಡ ಜುಲೈ 17 ರಂದು ಸುಪ್ರೀಂ ಕೋರ್ಟ್ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಅವರನ್ನು ಹುದ್ದೆಗೆ ಮಾಜಿ ನ್ಯಾಯಾಧೀಶರ ಹೆಸರನ್ನು ಚರ್ಚಿಸಲು ಹೇಳಿತ್ತು. ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಇಬ್ಬರು ಅಧಿಕಾರಿಗಳ ನಡುವಿನ ಸಭೆಯ ನಡುವೆ ಕೂಡ ಬಿಕ್ಕಟ್ಟು ಶಮನವಾಗದ ಹಿನ್ನೆಲೆ ಅಂತಿಮವಾಗಿ ಸುಪ್ರೀಂ ಕೋರ್ಟ್ DERC ಅಧ್ಯಕ್ಷರನ್ನು ನೇಮಕ ಮಾಡಿದೆ. ಶುಕ್ರವಾರದ ವಿಚಾರಣೆ ಸಂದರ್ಭ, ಮುಖ್ಯ ಕಾರ್ಯದರ್ಶಿ ಹುದ್ದೆಗೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿರುವ ಐವರು ಹಿರಿಯ ಅಧಿಕಾರಿಗಳ ಹೆಸರನ್ನು ಮಂಗಳವಾರ ಬೆಳಗ್ಗೆ 10.30ರೊಳಗೆ ತಿಳಿಸಲು ಪೀಠ ಸೂಚನೆ ನೀಡಿದೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಹೊಡೀತು ಲಾಟ್ರಿ- ಸರ್ಕಾರದಿಂದ ಹೊಸ ಭಾಗ್ಯ ಘೋಷಣೆ!!