Home National Ananth Ambani Marriage: ಅಂಬಾನಿ ಮಗನ ಮದುವೆ ಮಹೋತ್ಸವದಲ್ಲಿ ಪ್ರಧಾನಿ ಭಾಗಿ – ಮೋದಿ ಕೊಟ್ಟ...

Ananth Ambani Marriage: ಅಂಬಾನಿ ಮಗನ ಮದುವೆ ಮಹೋತ್ಸವದಲ್ಲಿ ಪ್ರಧಾನಿ ಭಾಗಿ – ಮೋದಿ ಕೊಟ್ಟ ಉಡುಗೊರೆ ಏನು?

Ananth Ambani Marriage

Hindu neighbor gifts plot of land

Hindu neighbour gifts land to Muslim journalist

Ananth Ambani Marriage: ಮುಂಬಯಿಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುತ್ತಿರುವ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ(PM Modi) ಭಾಗಿ ಆಗಿದ್ದಾರೆ.

ಖ್ಯಾತ ಉದ್ಯಮಿ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ, ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ(Neeta Ambani) ಮಗ ಅನಂತ್ ಅಂಬಾನಿ(Anantn Ambani) ಮತ್ತು ರಾಧಿಕಾ ಮರ್ಚೆಂಟ್(Radhika Marchant) ಅವರ ವಿವಾಹವು ಶುಕ್ರವಾರ ಅದ್ದೂರಿಯಾಗಿ ನಡೆಯಿತು. ಈ ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಪಾಲ್ಗೊಂಡರು.

ವಿವಾಹಮಹೋತ್ಸವದ ಭಾಗವಾಗಿ ಶನಿವಾರ ನಡೆದ ʻಶುಭ ಆಶೀರ್ವಾದʼ ಕಾರ್ಯಕ್ರಮದಲ್ಲಿ (Shubh Ashirwad Ceremony) ದೇಶ-ವಿದೇಶಗಳ ಗಣ್ಯರು, ಸೆಲೆಬ್ರಿಟಿಗಳು, ರಾಜಕಾರಣಿಗಳು ಪಾಲ್ಗೊಂಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹ ಎಸ್‌ಪಿಜಿ ಭದ್ರತೆಯೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗೆ ಉಡುಗೊರೆಯಾಗಿ ಆಶೀರ್ವದ ಮಾಡಿದರು.

ಮದುವೆ ನಡೆಯುತ್ತಿದ್ದ ಮುಂಬೈನ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ಗೆ ಮೋದಿ ಅಧರು ಆಗಮಿಸುತ್ತಲೇ ಮುಕೇಶ್‌ ಅಂಬಾನಿ ಹಾಗೂ ನೀತಾ ಅಂಬಾನಿ ಸ್ವಾಗತ ಕೋರಿದರು, ಬಳಿಕ ಮೋದಿ ಅವರ ಕಾಲಿಗೆ ನಮಸ್ಕರಿಸಿದರು. ಇದಾದ ಬಳಿಕ ಅಂಬಾನಿ ಕುಟುಂಬವನ್ನು ಭೇಟಿಯಾದ ಮೋದಿ, ಮುಕೇಶ್‌ ಅಂಬಾನಿ ಪಕ್ಕದಲ್ಲೇ ಕುಳಿತು ಕಾರ್ಯಕ್ರಮ ವೀಕ್ಷಿಸಿದರು. ಕೆಲಕಾಲ ಸಂಗೀತ ಆಲಿಸಿದರು.

Namma Metro: ಅಪರ್ಣಾ ಅಗಲಿಕೆ ಬೆನ್ನಲ್ಲೇ ‘ನಮ್ಮ ಮೆಟ್ರೋ’ ಹೊಸ ಮಾರ್ಗದಲ್ಲಿ ಬೇರೆ ಮಹಿಳೆಯ ಧ್ವನಿ !!