ಸೋಮವಾರ, 26 ಅಕ್ಟೋಬರ್ 2026
Trending

US: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ, RSS ನಿರ್ಬಂಧಿಸಿ ಅದರ ಆಸ್ತಿ ಜಪ್ತಿ ಮಾಡಿ – ಅಮೆರಿಕಾ ಶಿಫಾರಸು

Advertisement

US: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ವಿಪರೀತವಾಗಿ ಹದಗೆಟ್ಟಿದ್ದು ಹಿಂದೂ ರಾಷ್ಟ್ರೀಯವಾದಿ ಗುಂಪುಗಳಿಂದ ಅಲ್ಪಸಂಖ್ಯಾತರ ಮೇಲೆ ದಾಳಿಗಳು ಹೆಚ್ಚುತ್ತಿವೆ. ಹೀಗಾಗಿ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ದೇಶದಲ್ಲಿ ನಿರ್ಬಂಧಿಸಿ ಅದರ ಆಸ್ತಿಯನ್ನು ಜಪ್ತಿ ಮಾಡಿ ಎಂದು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ (ಯುಎಸ್ ಸಿಐಆರ್‌ಎಫ್) ಸರ್ಕಾರಕ್ಕೆ ಶಿಫಾರಸು ಮಾಡಿದೆ.

Sponsored

ಯುಎಸ್ ಸಿಐಆರ್‌ಎಫ್ ಇತ್ತೀಚೆಗೆ ಬಿಡುಗಡೆ ಮಾಡಿರುವ ವಾರ್ಷಿಕ ವರದಿಯಲ್ಲಿ ಭಾರತವನ್ನು ಮತ್ತೊಮ್ಮೆ ನಿರ್ದಿಷ್ಟ ಕಳವಳದ ದೇಶ ಎಂದು ಹೇಳಲಾಗಿದ್ದು, ದೇಶದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹದಗೆಟ್ಟಿದೆ ಎಂದು ಆರೋಪಿಸಿದೆ. ಜೊತೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದಂಥ (ಆರೆಸ್ಸೆಸ್) ಸಂಘಟನೆ ಹಾಗೂ ಭಾರತದ ಗುಪ್ತಚರ ಸಂಸ್ಥೆ ರಿಸರ್ಚ್ ಆಯಂಡ್ ಅನಾಲಿಸಿಸ್ ವಿಂಗ್ (ಆರ್ ಆಯಂಡ್ ಎಡಬ್ಲ್ಯು) ಮೇಲೆ ನಿರ್ಬಂಧ ಹೇರುವಂತೆ ಅಮೆರಿಕಾದ ಸಿಎಸ್‌ಐಆರ್‌ಎಫ್ ಶಿಫಾರಸು ಮಾಡಿದೆ. ಜತೆಗೆ, ಭಾರತಕ್ಕೆ ಶಸ್ತ್ರಾಸ್ತ್ರಗಳ ಮಾರಾಟ ತಡೆಹಿಡಿಯಬೇಕು ಎಂದು ಅಮೆರಿಕ ಸರ್ಕಾರಕ್ಕೆ ಅದು ಒತ್ತಾಯಿಸಿದೆ.

Advertisement
Advertisement

ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಅವರ ಪ್ರಾರ್ಥನಾ ಸ್ಥಳಗಳನ್ನು ಗುರಿ ಮಾಡುತ್ತಿದೆ. ಕಠಿಣ ಜೈಲುವಾಸಕ್ಕೆ ಅವಕಾಶವಿರುವ ಮತಾಂತರ ವಿರೋಧಿ ಕಾನೂನುಗಳನ್ನು ಅನೇಕ ರಾಜ್ಯಗಳು ಜಾರಿ ಮಾಡಲು ಪ್ರಯತ್ನಿಸುತ್ತಿವೆ. ಧಾರ್ಮಿಕ ನಿರಾಶ್ರಿತರು ಹಾಗೂ ಪ್ರಜೆಗಳನ್ನು ಅಕ್ರಮವಾಗಿ ಗಡೀಪಾರು ಮಾಡುವ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ದಾಳಿಯ ಪ್ರಕರಣಗಳು ಹೆಚ್ಚುತ್ತಿವೆ. ಅಲ್ಪಸಂಖ್ಯಾತರ ಮೇಲಿನ ದಾಳಿ ವಿರುದ್ಧ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಮಾಡಲದ ಶಿಫಾರಸು ಏನು?: 

ಆರೆಸ್ಸೆಸ್, ಮತ್ತಿತರ ಸಂಘಟನೆಗಳು, ಕೆಲ ವ್ಯಕ್ತಿಗಳಿಗೆ ಅಮೆರಿಕ ಪ್ರವೇಶ ನಿರ್ಬಂಧಿಸಬೇಕು, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಅಮೆರಿಕ ಸರ್ಕಾರವು ಧಾರ್ಮಿಕ ಸ್ವಾತಂತ್ರ್ಯದಲ್ಲಿ ಸುಧಾರಣೆ ತರುವಂತೆ ಭಾರತದ ಮೇಲೆ ಒತ್ತಡ ಹೇರಬೇಕು. ಅಮೆರಿಕದ ನಾಗರಿಕರು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರಿಗೆ ಬೆದರಿಕೆ ಮತ್ತು ಕಿರುಕುಳ ನೀಡುತ್ತಿರುವ ಆರೋಪದ ಮೇಲೆ ಶಸ್ತ್ರಾಸ್ತ್ರ ಪೂರೈಕೆ ನಿಯಂತ್ರಣ ಕಾಯ್ದೆಯ ಸೆಕ್ಷನ್ 6 ಅನ್ನು ಜಾರಿ ಮಾಡಿ ಶಸ್ತ್ರಾಸ್ತ್ರ ಮಾರಾಟ ತಡೆಹಿಡಿಯಬೇಕು.

Advertisement
div class="ere-sticky">