ಬೆಂಗಳೂರು: ರಾಜ್ಯದಲ್ಲಿ ಈರುಳ್ಳಿ ಬೆಲೆ ಮತ್ತೆ ಏರಿಕೆ ಕಂಡಿದ್ದು, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟತೊಡಗಿದೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ (APMC) ಈರುಳ್ಳಿ ಸಗಟು ದರ ಪ್ರತಿ ಕ್ವಿಂಟಲ್‌ಗೆ ₹5,200ರ ಗಡಿ ದಾಟಿದೆ.


ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ; ಪ್ರಯಾಣಿಕರಲ್ಲಿ ಆತಂಕ
ಕಳೆದ ಶನಿವಾರ ಮಾರುಕಟ್ಟೆಗೆ ಸುಮಾರು 65 ಸಾವಿರ ಚೀಲ ಈರುಳ್ಳಿ ಆವಕವಾಗಿದ್ದರೆ, ಸೋಮವಾರ ಈ ಪ್ರಮಾಣ 43,500 ಚೀಲಗಳಿಗೆ ಇಳಿಕೆಯಾಗಿದೆ. ಆವಕದಲ್ಲಿ ಉಂಟಾದ ಈ ತೀವ್ರ ಕುಸಿತದಿಂದ ಬೇಡಿಕೆಗೆ ತಕ್ಕಷ್ಟು ಪೂರೈಕೆಯಾಗದೆ ದರದಲ್ಲಿ ಏರಿಕೆಯಾಗಿದೆ.
ಬೆಂಗಳೂರಿನ ಚಿಲ್ಲರೆ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಸದ್ಯ ಕೆ.ಜಿಗೆ ₹50ರಿಂದ ₹55ರವರೆಗೆ ಮಾರಾಟವಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ದಸರಾ ಹಬ್ಬದ ವೇಳೆಗೆ ಈರುಳ್ಳಿ ದರ ಕೆ.ಜಿಗೆ ₹70ರಿಂದ ₹100ರವರೆಗೆ ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ; ಪ್ರಯಾಣಿಕರಲ್ಲಿ ಆತಂಕ
ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಹಬ್ಬಗಳ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಾಗಿರುವುದು, ಜತೆಗೆ ಹವಾಮಾನ ವೈಪರೀತ್ಯದಿಂದ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವುದು ದರ ಏರಿಕೆಗೆ ಪ್ರಮುಖ ಕಾರಣಗಳಾಗಿವೆ. ನವೆಂಬರ್ ವೇಳೆಗೆ ಸಗಟು ಮಾರುಕಟ್ಟೆಯಲ್ಲೇ ಈರುಳ್ಳಿ ದರ ಕೆ.ಜಿಗೆ ₹60ರ ಮಟ್ಟ ತಲುಪುವ ಸಾಧ್ಯತೆಯನ್ನೂ ಮಾರುಕಟ್ಟೆ ಮೂಲಗಳು ವ್ಯಕ್ತಪಡಿಸಿವೆ.
ಈ ನಡುವೆ ಬೆಲೆ ಏರಿಕೆಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಬಫರ್ ಸ್ಟಾಕ್‌ನಲ್ಲಿರುವ ಈರುಳ್ಳಿಯನ್ನು ಹಂತ ಹಂತವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಲು ಮುಂದಾಗಿದೆ. ಇದರಿಂದ ಪೂರೈಕೆ ಹೆಚ್ಚಾಗಿ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಬರುವ ನಿರೀಕ್ಷೆ ಇದೆ.

