Home News ಉಡುಪಿ Manipal: ಮಣಿಪಾಲದಲ್ಲಿ ‘ದೇವದಾಸ್ ಕಾಪಿಕಾಡ್’ ನಾಟಕ ತಂಡದ ಸದಸ್ಯರಿದ್ದ ಕಾರು ಅಪಘಾತ !!

Manipal: ಮಣಿಪಾಲದಲ್ಲಿ ‘ದೇವದಾಸ್ ಕಾಪಿಕಾಡ್’ ನಾಟಕ ತಂಡದ ಸದಸ್ಯರಿದ್ದ ಕಾರು ಅಪಘಾತ !!

Hindu neighbor gifts plot of land

Hindu neighbour gifts land to Muslim journalist

Manipala ದ ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್ ಬಳಿ ನಿನ್ನೆ ಸಂಜೆ ವೇಳೆ ತುಳು ನಾಟಕ ಕಲಾವಿದರ ಕಾರೊಂದು ಅಪಘಾತಕ್ಕೀಡಾಗಿದೆ. ಆದ್ರೆ ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಉಡುಪಿಯ ಹೀರೆಬೆಟ್ಟುವಿನಲ್ಲಿ ಇಂದು ಸಂಜೆ ಪ್ರದರ್ಶನಗೊಳ್ಳಲಿದ್ದ ‘ಏರ್ಲಾ ಗ್ಯಾರಂಟಿ ಅತ್ತು’ ನಾಟಕ ಪ್ರದರ್ಶನಕ್ಕಾಗಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್(Devdasa Kapikad)ಅವರ ನಾಟಕ ತಂಡದ ಸದಸ್ಯರು ಕಾರಿನಲ್ಲಿ ಸಂಚರಿಸುತ್ತಿದ್ದು, ಮಣಿಪಾಲ ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್ ಬಳಿ ಅ.27ರಂದು ಸಂಜೆ ವೇಳೆ ಈ ಕಾರು ಅಪಘಾತಕ್ಕೀಡಾಗಿದೆ.

ಅಂದರೆ ನಿಯಂತ್ರಣ ತಪ್ಪಿದ ಕಾರು ಹೊಂಡಕ್ಕೆ ಬಿದ್ದು ಅಪಘಾತಕ್ಕೀಡಾಗಿದೆ ಎಂದು ದೇವದಾಸ್ ಕಾಪಿಕಾಡ್ ಅವರ ನಾಟಕ. ಅಲ್ಲದೆ ಇದರಲ್ಲಿ ತುಳು ನಾಟಕದ ಕಲಾವಿದ ಭೋಜರಾಜ ವಾಮಂಜೂರ್ ಕೂಡ ಇದ್ದರು. ಪುಣ್ಯ ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.