ಶನಿವಾರ, 24 ಅಕ್ಟೋಬರ್ 2026

ಮೀನುಗಾರರ ಬಲೆಗೆ ಬೆಲೆ‌ ಏರಿಕೆ ಬಿಸಿ

ಏಪ್ರಿಲ್-ಮೇ ತಿಂಗಳು ವಿಫುಲವಾಗಿ ಮೀನುಗಾರಿಕೆ ನಡೆಸುವ ಸಮಯ. ಆದರೆ ದಿನದಿಂದ ದಿನಕ್ಕೆ ಏರುಗತಿಯಲ್ಲೇ ಸಾಗುತ್ತಿರುವ ಡೀಸೆಲ್​ ವೆಚ್ಚದಿಂದಾಗಿ ಮೀನುಗಾರರು ತೊಂದರೆಗೆ ಸಿಲುಕಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ತೈಲಬೆಲೆ ಹೆಚ್ಚಳವಾಗುತ್ತಿದೆ. ಗಗನಕ್ಕೇರುತ್ತಿರುವ ಡೀಸೆಲ್ ಬೆಲೆಯಿಂದ ಕರಾವಳಿಯ ಪ್ರಮುಖ ವಹಿವಾಟಾದ ಮತ್ಸೋದ್ಯಮದ ಮೇಲೆ ದುಷ್ಪರಿಣಾಮ ಬೀರಿದೆ. 

ಡೀಸೆಲ್ ವೆಚ್ಚವೂ ಸೇರಿದಂತೆ ಸುಮಾರು 5 ಲಕ್ಷ ರೂ. ವರೆಗೆ ಒಂದು ಟ್ರಿಪ್​ಗೆ ಖರ್ಚಾಗುತ್ತದೆ. ಆದರೆ, ಮೀನುಗಾರಿಕೆಗೆ ತೆರಳುತ್ತಿರುವ ಬೋಟ್​ಗಳಿಗೆ ಅಷ್ಟು ಪ್ರಮಾಣದ ಮೀನುಗಳು ಬಲೆಗೆ ಬೀಳುತ್ತಿಲ್ಲ. ಪರಿಣಾಮ ಮತ್ಸೋದ್ಯಮಿಗಳು ನಷ್ಟಕ್ಕೊಳಗಾಗುತ್ತಿದ್ದಾರೆ. 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ