Home Jobs Udupi: ಉಡುಪಿ ಉದ್ಯೋಗಾಕಾಂಕ್ಷಿಗಳೇ ಇತ್ತ ಗಮನಿಸಿ! ಆ.25, 28 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ!...

Udupi: ಉಡುಪಿ ಉದ್ಯೋಗಾಕಾಂಕ್ಷಿಗಳೇ ಇತ್ತ ಗಮನಿಸಿ! ಆ.25, 28 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ! ಇಲ್ಲಿದೆ ಸಂಪೂರ್ಣ ಮಾಹಿತಿ

Udupi
Image credit: Business Today.in

Hindu neighbor gifts plot of land

Hindu neighbour gifts land to Muslim journalist

Udupi: ಇಂದಿನ ಕಾಲದಲ್ಲಿ ಉದ್ಯೋಗ ಅತ್ಯವಶ್ಯಕವಾಗಿದೆ. ಆದರೆ, ಬಯಸಿದ ಉದ್ಯೋಗ(Job) ಪಡೆಯುವುದು ಸುಲಭದ ಮಾತಲ್ಲ. ಪೈಪೋಟಿಯ ನಡುವೆ ನೆಚ್ಚಿನ ಕೆಲಸ ಗಿಟ್ಟಿಸಿಕೊಳ್ಳೋದು ಯುವಜನತೆಯ ಪಾಲಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ, ಉದ್ಯೋಗ ಅರಸುತ್ತಿರುವ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಉಡುಪಿಯಲ್ಲಿ(Udupi)ಉದ್ಯೋಗ ಅರಸುತ್ತಿರುವ ಮಂದಿಗೆ ಗುಡ್ ನ್ಯೂಸ್(Good News)ಇಲ್ಲಿದೆ ನೋಡಿ.

ಉಡುಪಿ ಉದ್ಯೋಗಾಕಾಂಕ್ಷಿಗಳೇ ಇತ್ತ ಗಮನಿಸಿ! ಆ.25, 28 ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಉಡುಪಿಯಲ್ಲಿ ಆಗಸ್ಟ್ 25ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತರು ಭಾಗಿಯಾಗಿ ಉದ್ಯೋಗಾವಾಕಾಶ (Job Opportunity)ಪಡೆದುಕೊಳ್ಳಬಹುದು. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನೇರ ಸಂದರ್ಶನ(Interview)ಆಗಸ್ಟ್ 25ರಂದು ನಡೆಯಲಿದ್ದು, ಬೆಳಗ್ಗೆ 10.30ಕ್ಕೆ ಉಡುಪಿ ನಗರದ ಬನ್ನಂಜೆ ರೋಡ್ ಶ್ರೀರಾಮ್ ಬಿಲ್ಡಿಂಗ್ 2ನೇ ಮಹಡಿಯ ಮಹೀಂದ್ರ ರೂರಲ್ ಹೌಸಿಂಗ್ ಪ್ರೆ, ಲಿಮಿಟೆಡ್ ನಲ್ಲಿ ನಡೆಯಲಿದೆ.

SSLC, PUC, ITI, ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮೆ/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಿ ಉದ್ಯೋಗಾವಕಾಶ ಪಡೆಯಬಹುದು. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ- ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಈ ಕುರಿತುಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

* ಉಡುಪಿಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ನಮ್ಮ ಕ್ಲಿನಿಕ್ ನಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳು 2 ಹುದ್ದೆಗಳು (ನಮ್ಮ ಕ್ಲಿನಿಕ್ ಟಿ.ಟಿ ರೋಡ್ ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಸಾರ್ವಜನಿಕ ಆಸ್ಪತ್ರೆ) ಖಾಲಿಯಿದೆ. ಈ ಕೆಳಕಂಡ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗೆ ಆಗಸ್ಟ್ 28 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಖಾಲಿ ಹುದ್ದೆಗಳ ವಿವರ ಹೀಗಿದೆ:

ಆಡಿಯೋಮೆಟ್ರಿಕ್ ಅಸಿಸ್ಟೆಂಟ್- 1
ಇನ್ಸ್ಟ್ರಕ್ಟರ್- ಯಂಗ್ ಹಿಯರಿಂಗ್ ಇಂಪೈರಿಡ್ ಚಿಲ್ಡ್ರನ್ (ಜಿಲ್ಲಾ ಆಸ್ಪತ್ರೆ)- 1
ನಗರ ಆರೋಗ್ಯ ಕೇಂದ್ರದಲ್ಲಿ ಎಲ್.ಹೆಚ್.ವಿ – 1
ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ (ಉಡುಪಿ)ಖಾಲಿ ಇರುವ ಶುಶ್ರೂಷಕರ-3 ಹುದ್ದೆ

ಮೇಲೆ ತಿಳಿಸಿದ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ಆಗಸ್ಟ್ 28ರಂದು ಉಡುಪಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕು.ಕ. ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Death News: ಶಾಲಾ ಬಸ್‌ನಿಂದ ತಲೆ ಹೊರಹಾಕಿದ ಬಾಲಕಿ; ಕಂಬಕ್ಕೆ ತಲೆ ಒಡೆದು, ಬಾಲಕಿ ಸಾವು!!!