

Udupi: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜೆ.ಪಿ.ಹೆಗಡೆ ಅವರು ಕಾಂಗ್ರೆಸ್ ಪಕ್ಷ ಸೇರುವ ನಿರ್ಧಾರವನ್ನು ದೃಢಪಡಿಸಿದ್ದಾರೆ. ಅವರು ತಮ್ಮ ಅಧಿಕೃತ ಹೇಳಿಕೆಯಲ್ಲಿ ಮಾರ್ಚ್ 12 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ.
ಇದನ್ನೂ ಓದಿ: CAA Enforcement: ಸಿಎಎ ಜಾರಿ ಹಿನ್ನಲೆ : ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಭದ್ರತೆ ಹೆಚ್ಚಳ
ನನ್ನ ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ನನಗೆ ಯಾವಾಗಲೂ ಮಾರ್ಗದರ್ಶನ ಮತ್ತು ಬೆಂಬಲ ನೀಡಿದ ನಿಮಗೆಲ್ಲರಿಗೂ ನಾನು ಋಣಿಯಾಗಿದ್ದೇನೆ. ನಾನು ಈ ವಿಷಯವನ್ನು ನಿಮ್ಮೊಂದಿಗೆ ಚರ್ಚಿಸಿದ್ದೇನೆ ಮತ್ತು ನನ್ನ ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದೇನೆ. ಕರಾವಳಿ ಕರ್ನಾಟಕದ ಅಭಿವೃದ್ಧಿಗಾಗಿ ರಾಜಕೀಯದಲ್ಲಿ ಸಕ್ರಿಯರಾಗಲು ಸಂಕಲ್ಪ ಮಾಡಿದ್ದೇನೆ. ಅದರಂತೆ ಮಾರ್ಚ್ 12 ರ ಮಂಗಳವಾರ ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ. ನಾನು ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದೇನೆ ಮತ್ತು ನನ್ನ ಮುಂದಿನ ರಾಜಕೀಯ ನಡೆ ನಿರ್ಧರಿಸಿದ್ದೇನೆ. ನನ್ನೊಂದಿಗೆ ಇದ್ದ ನೀವೆಲ್ಲರೂ ಮಾರ್ಚ್ 12ರಂದು ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ (ಕ್ವೀನ್ಸ್ ರೋಡ್) ನನ್ನೊಂದಿಗೆ ಸೇರಬೇಕೆಂದು ನಾನು ವಿನಂತಿಸುತ್ತೇನೆ. ನನಗೆ ಮಾರ್ಗದರ್ಶನ ನೀಡಲು ಮತ್ತು ನಿಮ್ಮ ಸಂಪೂರ್ಣ ಸಹಕಾರವನ್ನು ನೀಡುವಂತೆ ನಾನು ನಿಮ್ಮೆಲ್ಲರನ್ನು ವಿನಂತಿಸುತ್ತೇನೆʼ ಎಂದು ಅವರು ಹೇಳಿದರು.












