# ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಪಲ್ಟಿ !! | ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

- Link: https://hosakannada.com/news/%e0%b2%89%e0%b2%a1%e0%b3%81%e0%b2%aa%e0%b2%bf/private-bus-accident-news/
- Published: 2022-05-12T17:15:10+00:00
- Author: ನಿಶ್ಮಿತಾ ಎನ್.

ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ 
ಘಟನೆ ಉಡುಪಿಯ ಉದ್ಯಾವರ ಜಂಕ್ಷನ್ ಬಳಿ ನಡೆದಿದೆ.

Sponsored

ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ
ಪಾರಾಗಿದ್ದಾರೆ. ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂಬಕ್ಕೆ
ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ಗೆ ಹಾರಿ ಪಲ್ಟಿಯಾಗಿದೆ ಎನ್ನಲಾಗಿದೆ.

Advertisement

Advertisement

> [ಪೋಸ್ಟ್ ಆಫೀಸ್ ಹಾಗೂ ಬ್ಯಾಂಕ್ ಗ್ರಾಹಕರೇ ಗಮನಿಸಿ !! | ವಹಿವಾಟಿನ ನಿಯಮಗಳಲ್ಲಿ ಭಾರೀ ಬದಲಾವಣೆ, ಮೇ 26 ರಿಂದಲೇ ಹೊಸ ನಿಯಮ ಜಾರಿಗೆ](https://hosakannada.com/news/post-office-and-bank-new-rules/)

Advertisement
