Home News ಉಡುಪಿ ಕೆಲಸದ ಒತ್ತಡದಿಂದ ಖಿನ್ನತೆ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

ಕೆಲಸದ ಒತ್ತಡದಿಂದ ಖಿನ್ನತೆ | ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

Hindu neighbor gifts plot of land

Hindu neighbour gifts land to Muslim journalist

ಮಣಿಪಾಲ: ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ರವಿವಾರ ಮೂಡು ಅಲೆವೂರು ಎಂಬಲ್ಲಿ ನಡೆದಿದೆ.

ಮೃತರನ್ನು ವಿದ್ಯೋದಯ ಪಬ್ಲಿಕ್‌ ಸ್ಕೂಲ್ ನಲ್ಲಿ ಶಿಕ್ಷಕಿ ಹಾಗೂ ಮೂಡು ಅಲೆವೂರಿನ ಬಾಲಗೋಪಾಲ ಎಂಬವರ ಪುತ್ರಿ ಅಮೃತಾ ಎಂದು ಗುರುತಿಸಲಾಗಿದೆ.

ಇವರು ಕಳೆದ 8 ವರ್ಷಗಳಿಂದ ವಿದ್ಯೋದಯ ಪಬ್ಲಿಕ್‌ ಸ್ಕೂಲ್ ನಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಇದೇ ಚಿಂತೆಯಲ್ಲಿ ಮನನೊಂದ ಇವರು ಮನೆಯ ಕೋಣೆಯಲ್ಲಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.