Home News ಉಡುಪಿ Udupi: ನಾವು ಕರೆಂಟ್‌ ಬಿಲ್‌ ಕಟ್ಟೋದಿಲ್ಲ, ಕ್ಷಮಿಸಿ ಮೆಸ್ಕಾಂ!

Udupi: ನಾವು ಕರೆಂಟ್‌ ಬಿಲ್‌ ಕಟ್ಟೋದಿಲ್ಲ, ಕ್ಷಮಿಸಿ ಮೆಸ್ಕಾಂ!

Electricity Bill
Image source: Kannada news now

Hindu neighbor gifts plot of land

Hindu neighbour gifts land to Muslim journalist

ವಿದ್ಯುತ್ ಬಿಲ್: ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ (ಚುನಾವಣೆ) ಪೂರ್ಣಗೊಂಡಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಿದೆ. ಸದ್ಯ ಕಾಂಗ್ರೆಸ್ ಪಕ್ಷ ರಚನೆ ಮಾಡಲಿದೆ, ಈ ಹಿನ್ನಲೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಯಾರಿಗುಂಟು ಎಂಬ ಆಟ ಶುರುವಾಗಿದೆ, ಇನ್ನೇನು ಮಾನ್ಯ ಮುಖ್ಯ ಮಂತ್ರಿಗಳ ನೇಮಕ ಆಗಲಿದೆ. ಇದರ ನಡುವೆ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂಬ ಡೈಲಾಗ್ ಅಲ್ಲಲ್ಲಿ ಕಾಣಸಿಗುತ್ತಿದೆ.

ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ (ವಿದ್ಯುತ್ ಬಿಲ್) ನಿಗದಿಪಡಿಸಲಾಗಿದೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆ ಮಾಡಿತ್ತು(ಕರ್ನಾಟಕ ವಿಧಾನಸಭೆ ಚುನಾವಣೆ 2023 ಫಲಿತಾಂಶ). ಸದ್ಯ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ನಾವು ಕರೆಂಟ್ ಬಿಲ್ ಕಟ್ಟಲ್ಲವೆಂದು ಜನ ಪಟ್ಟು ಹಿಡಿದಿದ್ದಾರೆ.

ಕಾಂಗ್ರೆಸ್ ಸರ್ಕಾರ ಬಂದಿದೆ ನಾವು ಕರೆಂಟ್ ಬಿಲ್ಲ ಕಟ್ಟಲ್ಲ ಎಂದು ಗ್ರಾಮಸ್ಥರು ಬೆಸ್ಕಾಂ ಮೀಟರ್ ರೀಡರ್ ಗೆ ಅವಾಜ್ ಹಾಕಿದ ಘಟನೆ ಚಿತ್ರದುರ್ಗ ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ನಡೆದಿತ್ತು . ಜಿಲ್ಲೆಯ ಜಾಲಿಕಟ್ಟೆ ಗ್ರಾಮದಲ್ಲಿ ಜನರು ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದು, ಮೀಟರ್ ರೀಡರ್ ಗೆ ಅವಾಜ್ ಹಾಕಿದ್ದಾರೆ. ಆದರೆ ಆದೇಶ ಬರುವವರೆಗೂ ಬಿಲ್ ಕಟ್ಟಲೇಬೇಕು ಎಂದು ಹೇಳಿದರೂ ಕೂಡ ಜನರು ಕೇಳುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಅದಲ್ಲದೆ ಇಂದು ಉಡುಪಿಯ ಪೆರಂಪಳ್ಳಿ ನಿವಾಸಿ ವಾಸುದೇವ ಭಟ್ ಅವರು ತಮ್ಮ ಮನೆಯ ಮೀಟರ್ ಬೋರ್ಡ್​ಗೆ ಚೀಟಿ ಅಂಟಿಸಿದ್ದಾರೆ. ಅದರಲ್ಲಿ ಮೆಸ್ಕಾಂನವರೆ ಕ್ಷಮಿಸಿ, ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ. ನಾವು ಬಿಲ್ ಕಟ್ಟಲ್ಲ ಎಂದು ಬರೆದು ಅಂಟಿಸಿದ್ದಾರೆ.

ಕಾಂಗ್ರೆಸ್ ಸರಕಾರ ಬಂದರೆ ಹಲವಾರು ಉಚಿತ ಯೋಜನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಜೂನ್ ತಿಂಗಳಿಂದಲೇ ಉಚಿತ ವಿದ್ಯುತ್ ಕೊಡುವ ಯೋಜನೆ ಘೋಷಣೆಯಾಗಿದೆ. ತಾನು ಸೇರಿದಂತೆ ಯಾರೂ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಶೇಕಡಾ 95 ಜನತೆ ಇದರ ಲಾಭ ಪಡೆಯಬಹುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಿಕೆಶಿ ಹೇಳಿರುವ ಶೇಕಡಾ 95ರ ಒಳಗೆ ನಾನು ಕೂಡ ಬರುತ್ತೇನೆ. ನಾನು ಕೂಡ ಒಬ್ಬ ಫಲಾನುಭವಿ ಎಂಬುದು ದೃಢ ಆಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ ನಾನು ವಿದ್ಯುತ್ ಬಿಲ್ ಕಟ್ಟೋದಿಲ್ಲಾ. ನಾನು ತಿಂಗಳಿಗೆ 200 ಯೂನಿಟ್ ಖರ್ಚು ಮಾಡುತ್ತಿಲ್ಲ. ನಾನು ಫಲಾನುಭವಿ ಆಗಿರುವುದರಿಂದ ಮೀಟರ್ ಬೋರ್ಡಿನಲ್ಲಿ ಫಲಕ ಹಾಕಿದ್ದೇನೆ. ನಾನು ಇಲ್ಲದಿರುವಾಗ ಮೆಸ್ಕಾಂನವರು ಬಂದರೆ ಅವರಿಗೆ ಗೊತ್ತಾಗಲಿ ಎಂದು ಬೋರ್ಡ್ ಅಳವಡಿಸಿದ್ದೇನೆ. ನನಗೆ ಮೆಸ್ಕಾಂನವರು ಕರೆಂಟ್ ಬಿಲ್ ಕೊಡಬೇಕಾಗಿಲ್ಲ. ನಾನು ಸರಕಾರಕ್ಕೆ ತೆರಿಗೆ ಕಟ್ಟುತ್ತಿರುವುದರಿಂದ ಈ ಯೋಜನೆಗೆ ಅರ್ಹ ಫಲಾನುಭವಿ ಆಗಿದ್ದೇನೆ ಎಂದು ಉಡುಪಿಯ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಮಾರ್ಟ್ ಟಿವಿ: ಫ್ರೀ ಫ್ರೀ! ಒಂದು ರೂಪಾಯಿಯೂ ಖರ್ಚಾಗಲ್ಲ, 55-ಇಂಚಿನ ಸ್ಮಾರ್ಟ್ ಟಿವಿ ಫ್ರೀ! ಇಲ್ಲಿದೆ ಮಾಹಿತಿ