ಮಂಗಳವಾರ, 27 ಅಕ್ಟೋಬರ್ 2026
Trending

ಪ್ರವಾಸ ಮುಗಿಸಿ ವಾಪಾಸು ಬರುವಾಗ ಭೀಕರ ಅಪಘಾತ| ನಾಲ್ವರು ಎಂಜಿನಿಯರ್ ವಿದ್ಯಾರ್ಥಿಗಳ ದಾರುಣ ಸಾವು| ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜು

ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಕೋಲಾರಕ್ಕೆ ಹೋಗಿ ಅಲ್ಲಿಂದ ಬೆಂಗಳೂರಿಗೆ ವಾಪಾಸ್ ಬರುತ್ತಿರುವ ಸಂದರ್ಭದಲ್ಲಿ ಹೊಸಕೋಟೆ ತಾಲೂಕಿನ ಅಟ್ಟೂರ್ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಎಂಜಿನಿಯರ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Sponsored

ಕಾರಿನಲ್ಲಿ ಆರು ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ ‌ ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಮೃತ ದುರ್ದೈವಿಗಳು. ಶ್ರೀಕೃಷ್ಣ, ಅಂಕಿತಾ ರೆಡ್ಡಿ ಎಂಬುವವರಿಗೆ ಗಂಭೀರ ಗಾಯವಾಗಿದೆ.

Advertisement
Advertisement

ಮೃತರೆಲ್ಲರೂ ಗಾರ್ಡನ್ ಸಿಟಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಮೊದಲು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ನಂತರ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಹೊಸಕೋಟೆ ಸಿಪಿಐ ಮಂಜುನಾಥ್ ಭೇಟಿ ನೀಡಿದ್ದಾರೆ. ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಾಳು ವಿದ್ಯಾರ್ಥಿಗಳನ್ನು ಹೊಸಕೋಟೆಯ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶವಗಳನ್ನು ಎಂವಿಜೆ‌ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.

Advertisement