Home latest ರೀಲ್ಸ್ ಹುಚ್ಚು ಜೀವಕ್ಕೇ ತಂದಿತು ಕುತ್ತು!! ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಯುವತಿಯರ ದುರಂತ ಅಂತ್ಯ!!

ರೀಲ್ಸ್ ಹುಚ್ಚು ಜೀವಕ್ಕೇ ತಂದಿತು ಕುತ್ತು!! ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಯುವತಿಯರ ದುರಂತ ಅಂತ್ಯ!!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು:ರಸ್ತೆ ಬದಿಯ ಚರಂಡಿಗೆ ಬಿದ್ದು ಯುವತಿಯೊರ್ವಳು ಮೃತಪಟ್ಟ ಘಟನೆಯೊಂದು ಬೆಂಗಳೂರು ನಗರದ ಎಚ್.ಬಿ.ಆರ್ ಲೇಔಟ್ ನ ರಸ್ತೆಯಲ್ಲಿ ನಡೆದಿದೆ.

ಮೃತ ಯುವತಿಯನ್ನು ತಾರಾ ಬಡಾಯಿಕ್ ಎಂದು ಗುರುತಿಸಲಾಗಿದ್ದು, ಈಕೆ ರಾತ್ರಿ ಹೊತ್ತಿನಲ್ಲಿ ತನ್ನ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಬಿದ್ದಿದ್ದಾಳೆ ಎನ್ನಲಾಗಿದ್ದು, ಗಂಭೀರ ಗಾಯಗೊಂಡ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರ: ನೆಂಟರ ಮನೆಯ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೊರ್ವಳು ತನ್ನ ಗೆಳತಿಯೊಂದಿಗೆ ವಿಡಿಯೋ ಮಾಡಲು ಕೆರೆ ಪಕ್ಕ ತೆರಳಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆಯೊಂದು ಚಿಕ್ಕಬಳ್ಳಾಪುರದ ಗಂಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ಎಂ.ಎ ಪದವೀಧರೆ ಅಮೃತ(22) ಎಂದು ಗುರುತಿಸಲಾಗಿದೆ. ಈಕೆ ತನ್ನ ಸಂಬಂಧಿಕರ ಮನೆಯ ಗೃಹ ಪ್ರವೇಶಕ್ಕೆಂದು ಬಂದಿದ್ದು, ರೀಲ್ಸ್ ಮಾಡುವ ಹುಚ್ಚಿನಿಂದ ಗೆಳತಿಯೊಂದಿಗೆ ಊರಿನ ಕೆರೆಯ ಪಕ್ಕ ತೆರಳಿದ್ದಳು ಎನ್ನಲಾಗಿದೆ.

ಕೆರೆಯ ಅಂಚಿನ ದಿಂಡಿನ ಮೇಲೆ ನಡೆಯುತ್ತಿರಬೇಕಾದರೆ ಆಕಸ್ಮಿಕವಾಗಿ ಕಾಲು ಜಾರಿದ ಪರಿಣಾಮ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದ್ದು,ಕುಟುಂಬಸ್ಥರ ರೋಧನೆ ಮುಗಿಲುಮುಟ್ಟುವಂತಿತ್ತು.