Home News ಬೆಂಗಳೂರು ಬೆಂಗಳೂರಲ್ಲಿ ಬಕ್ರೀದ್ ಹಬ್ಬಕ್ಕೆ ಅನಧಿಕೃತ ಪ್ರಾಣಿವಧೆ ನಿಷೇಧ : ಬಿಬಿಎಂಪಿ ಆದೇಶ

ಬೆಂಗಳೂರಲ್ಲಿ ಬಕ್ರೀದ್ ಹಬ್ಬಕ್ಕೆ ಅನಧಿಕೃತ ಪ್ರಾಣಿವಧೆ ನಿಷೇಧ : ಬಿಬಿಎಂಪಿ ಆದೇಶ

Bengalore
Image source :Siasat.com

Hindu neighbor gifts plot of land

Hindu neighbour gifts land to Muslim journalist

Bengalore : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ(Bengalore) ಬಕ್ರೀದ್ ಹಬ್ಬದಂದು ಅನಧಿಕೃತವಾಗಿ ಪ್ರಾಣಿವಧೆ ನಿಷೇಧಿಸಲಾಗಿದೆ ಎಂದು ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕ ಡಾ. ಕೆ.ಪಿ. ರವಿಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ.

 

ಬಕ್ರೀದ್ ತ್ಯಾಗ ಬಲಿದಾನದ ಸಂಕೇತವಾಗಿದ್ದು, ಭಾರತವೂ ಸೇರಿದಂತೆ ವಿಶ್ವದ್ಯಾಂತ ಮುಸ್ಲಿಮರು ಈ ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತದೆ . ರಂಜಾನ್ ತಿಂಗಳ ಕೊನೆಯಲ್ಲಿ ಬರುವ ಈದ್-ಉಲ್-ಫಿತರ್ ನಂತರ ಸುಮಾರು ಎರಡು ತಿಂಗಳು ಕಳೆದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಜಾನುವಾರುಗಳನ್ನು ಬಲಿ ನೀಡುವ ಮೂಲಕ ಮುಸ್ಲಿಮರು ಬಕ್ರೀದ್ ಆಚರಿಸುತ್ತಾರೆ. ಬಕ್ರೀದ್‌ ಹಬ್ಬವು ಮುಸ್ಲಿಂ ಸಮುದಾಯದವರ ಪವಿತ್ರ ಹಬ್ಬವಾಗಿದ್ದು, ಇದು ಇಬ್ರಾಹಿಂನ ತ್ಯಾಗವನ್ನು ಸ್ಮರಿಸುವ ದಿನವಾಗಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಕ್ರೀದ್ ಹಬ್ಬದಂದು ಅನಧಿಕೃತವಾಗಿ ಪ್ರಾಣಿವಧೆ ನಿರ್ಭಂಧಿಸಿ ಎಂದು ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕ ಡಾ. ಕೆ.ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

 

ಅಲ್ಲದೇ ಹಬ್ಬದ ನಿಮಿತ್ತ ಸಾರ್ವಜನಿಕ ಪ್ರದೇಶಗಳಾದ ಆಸ್ಪತ್ರೆ ಆವರಣಗಳು, ರಸ್ತೆಗಳ ಸಮೀಪ, ನರ್ಸಿಂಗ್ ಹೋಂ ಒಳ ಮತ್ತು ಹೊರ ಆವರಣಗಳು, ಶಾಲೆ ಕಾಲೇಜುಗಳ ಒಳ ಮತ್ತು ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ದೇವಸ್ಥಾನಗಳು ಅಥವಾ ಮಸೀದಿಗಳು ಹಾಗೂ ಇತರೆ ಧಾರ್ಮಿಕ ಸ್ಥಳಗಳ ಪ್ರಾಣಿ ಬಲಿ ಕೊಡುವುದನ್ನು ನಿರ್ಬಂಧಿಸಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಆದೇಶ ನೀಡಲಾಗಿದೆ.

 

ಯಾವುದೇ ವಯಸ್ಸಿನ ದನ, ಆಕಳು, ಎತ್ತು ಹೋರಿ, ಕರುಗಳನ್ನು ಬಲಿ ಅಥವಾ ಕುರ್ಬಾನಿ ಅಥವಾ ವಧೆ ಮಾಡುವುದನ್ನುಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರಂತೆ ನಿಷೇಧ ಹೇರಲಾಗಿದೆ ಎಂದು ವರದಿಯಾಗಿದೆ. ಅಲ್ಲದೇ ಬಕ್ರೀದ್ ಹಬ್ಬ ಪ್ರಯುಕ್ತ ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪ್ರಾಣಿ ವಧೆ ಮಾಡಿದಲ್ಲಿ ಸಹಾಯವಾಣಿ ಸಂಖ್ಯೆ 8277100200 ಗೆ ಕರೆ ಮಾಡಿ ದೂರು ಅಥವಾ ಮಾಹಿತಿ ನೀಡಬಹುದು ಎಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ :ಬಸ್ಸು ನಿಲ್ಲಿಸಿಲ್ಲ ಎಂದು ಬಸ್ಸಿಗೆ ಕಲ್ಲು ಬೀರಿದ ಮಹಿಳೆ, ಉಚಿತ ಬಸ್ಸು ಏರಲು ಹೋದವಳು 5000 ಕಕ್ಕಿದಳು !