Home latest ಕ್ರಿಕೆಟ್ ಪಂದ್ಯಾಟದಲ್ಲಿ ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿಯಿಂದ ಇರಿದು ಇಬ್ಬರ ಕೊಲೆ

ಕ್ರಿಕೆಟ್ ಪಂದ್ಯಾಟದಲ್ಲಿ ಕ್ಷುಲ್ಲಕ ವಿಚಾರದಲ್ಲಿ ಗಲಾಟೆ : ಚೂರಿಯಿಂದ ಇರಿದು ಇಬ್ಬರ ಕೊಲೆ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಕ್ರಿಕೆಟ್ ಪಂದ್ಯಾಟದ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.

ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಕ್ಷುಲ್ಲಕ ವಿಚಾರದಲ್ಲಿ ಉಂಟಾದ ಗಲಾಟೆಯಲ್ಲಿ ಭರತ್ ಮತ್ತು ಪ್ರತೀಕ್ ಕೊಲೆಯಾದ ಯುವಕರು.

ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ ಕ್ರಿಕೆಟ್ ಪಂದ್ಯಾಟ ಆಯೋಜನೆ ಮಾಡಲಾಗಿತ್ತು.ಈ ಸಂದರ್ಭದಲ್ಲಿ ಕ್ರಿಕೆಟ್ ಆಡುವಾಗ ಕ್ಷುಲ್ಲಕ ಕಾರಣಕ್ಕೆ ನಡೆದಿದೆ.

ಶಿವರಾತ್ರಿ ಹಬ್ಬದ ಪ್ರಯುಕ್ತ ಬಿಜೆಪಿ ಮುಖಂಡ ಧೀರಜ್​ ಅವರು ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದ್ದು, ಈ ವೇಳೆ ಮೈದಾನದಲ್ಲಿ ಕಾರು ನಿಲ್ಲಿಸಿದ್ದನ್ನು ಭರತ್ ಹಾಗೂ ಪ್ರತೀಕ್ ಪ್ರಶ್ನಿಸಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆದು 2 ಗುಂಪುಗಳ ನಡುವೆ ಮಾರಾಮಾರಿಯಾಗಿದೆ.

ಗ್ರಾಮಸ್ಥರು, ಇತರೆ ಆಟಗಾರರು ಜಗಳ ಬಿಡಿಸಿ ಕಳುಹಿಸಿದ್ದರು. ಇನ್ನೇನು ಎಲ್ಲಾ ಮುಗಿತು ಎನ್ನುವಷ್ಟರಲ್ಲೇ ಭರತ್, ಪ್ರತೀಕ್ ಬಸ್​ ಸ್ಟ್ಯಾಂಡ್​ಗೆ ಬಂದಾಗ ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಜಗಳದಲ್ಲಿ ಯುವಕರು ಭರತ್, ಪ್ರತೀಕ್‌ಗೆ ಚಾಕುವಿನಿಂದ ಇರಿದಿದ್ದಾರೆ.ಇದರಿಂದ ಗಂಭೀರ ಗಾಯಗೊಂಡ ಅವರಿಬ್ಬರು ಮೃತಪಟ್ಟರು. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.