Home News ಬೆಂಗಳೂರು ಅ.11ರವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ | ರಾಜ್ಯ ಸರ್ಕಾರ ಆದೇಶ

ಅ.11ರವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ | ರಾಜ್ಯ ಸರ್ಕಾರ ಆದೇಶ

Hindu neighbor gifts plot of land

Hindu neighbour gifts land to Muslim journalist

ಕೋವಿಡ್-19 ಪ್ರಕರಣಗಳನ್ನು ಇನ್ನಷ್ಟು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ರಾಜ್ಯದಾದ್ಯಂತ ಜಾರಿಯಲ್ಲಿರುವ ರಾತ್ರಿ ಕರ್ಪೂ ವನ್ನು ಅಕ್ಟೋಬರ್ 11ರ ಬೆಳಿಗ್ಗೆ 5 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದಿನ ಆದೇಶದ ಅನ್ವಯ ಸೆ.27ರ ಬೆಳಿಗ್ಗೆ 5 ಗಂಟೆಗೆ ರಾತ್ರಿ ಕರ್ಫ್ಯೂ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ
ಹೊಸ ಆದೇಶ ಹೊರಡಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯವಾಗಲಿದೆ. ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ಕರ್ಪೂ ಜಾರಿ 3 ಯಲ್ಲಿರುತ್ತದೆ.

ಈ ಅವಧಿಯಲ್ಲಿ ಕೋವಿಡ್ ಮಾರ್ಗಸೂಚಿಯಲ್ಲಿ ಈಗಾಗಲೇ ಸೂಚಿಸಿರುವ ಚಟುವಟಿಕೆಗಳನ್ನು ಬಿಟ್ಟು ಉಳಿದ ಎಲ್ಲ ಚಟುವಟಿಕೆಗಳಿಗೂ ನಿರ್ಬಂಧವಿರುತ್ತದೆ. ರಾತ್ರಿ 10 ರ ಬಳಿಕ ಓಡಾಟಕ್ಕೆ ಅವಕಾಶ ಇರುವುದಿಲ್ಲ. ಸಾಲು ಸಾಲು ಹಬ್ಬಗಳು ಬರುವುದರಿಂದ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆ ಆಗಬಾರದು ಎಂಬ ಕಾರಣಕ್ಕೆ ಕರ್ಫ್ಯೂ ಮುಂದುವರಿಕೆ ಅಗತ್ಯವಿದೆ ಎಂದು ಈ ಆದೇಶದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ತಿಳಿಸಿದ್ದಾರೆ.

ಅ.3 ರಿಂದ ಪಬ್‌ಗಳನ್ನು ತೆರೆಯಲು ಅನುಮತಿ ನೀಡಿದ್ದು, ಕೋವಿಡ್ ನಿಯಮಾವಳಿಗಳಿಗೆ ಅನುಸಾರವೇ ಕಾರ್ಯ ನಿರ್ವಹಿಸಬೇಕು. ರಾತ್ರಿ, ಕರ್ಪೂವನ್ನೂ ಪಾಲಿಸಬೇಕು, ಕೋವಿಡ್ ಪ್ರಕರಣಗಳು ಹೆಚ್ಚು ಇರುವ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಗಳಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟೆಚ್ಚರ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.