ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಸಿಜೆಪಿ ಪಕ್ಷ ಹಾಗೂ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದರು. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರವು ಹೊಸ ಕಾಯ್ದೆಯನ್ನು ತರುತ್ತಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಮುಂದಾಗಿದೆ.
ಹೌದು, ದೇಶದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳನ್ನು ತಡೆಯಲು ಹಾಲಿ ಇರುವ ಕಾನೂನುಗಳನ್ನು ಮತ್ತಷ್ಟು ಕಠಿಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ 2024ಕ್ಕೆ ತಿದ್ದುಪಡಿ ತರಲು ಯೋಜಿಸಿದೆ. ಈ ಪ್ರಸ್ತಾವಿತ ತಿದ್ದುಪಡಿಗಳಿಗೆ ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವರ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ವೈಯಕ್ತಿಕ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ 3 ರಿಂದ 5 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಹೊಸ ತಿದ್ದುಪಡಿಯ ಪ್ರಕಾರ ಶಿಕ್ಷೆಯ ಅವಧಿಯನ್ನು 5 ರಿಂದ 10 ವರ್ಷಗಳ ಜೈಲು ಶಿಕ್ಷೆಗೆ ಹೆಚ್ಚಿಸಲಾಗುತ್ತಿದ್ದು, ದಂಡದ ಪ್ರಮಾಣವನ್ನು 1 ಕೋಟಿ ರೂ.ರೆಗೆ ಏರಿಸಲು ಉದ್ದೇಶಿಸಲಾಗಿದೆ.




