ಸೋಮವಾರ, 26 ಅಕ್ಟೋಬರ್ 2026
Trending

ಡಿಕೆ ಸರಕಾರಕ್ಕೆ 100 ದಿನ; ರೈತರು, ಮಹಿಳೆಯರು, ವಿದ್ಯಾರ್ಥಿಗಳಿಗೆ ಬಂಪರ್‌ ಕೊಡುಗೆ

D k Shivkumar

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ನೇತೃತ್ವದ ರಾಜ್ಯ ಸರಕಾರ ನೂರು ದಿನಗಳನ್ನು ಪೂರೈಸುತ್ತಿರುವ ಸಂಭ್ರಮದ ಹಿನ್ನೆಲೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹಿಳೆಯರು, ರೈತರು, ವಿದ್ಯಾರ್ಥಿಗಳಿಗೆ ಸರಕಾರ ಬಂಪರ್‌ ಯೋಜನೆಗಳನ್ನು ಘೋಷಿಸಿದೆ.

Sponsored

ಸಣ್ಣ ರೈತರ ಭೂಮಿಯನ್ನು ಸರಕಾರದಿಂದಲೇ ಉಚಿತ ಉಳುಮೆ ಮಾಡಿಕೊಡುವ ʼಮುಖ್ಯಮಂತ್ರಿ ನೇಗಿಲ ಯೋಗಿʼ ಯೋಜನೆಗೆ ಅನುಮೋದನೆ ನೀಡಲಾಗಿದೆ. 31 ತಾಲೂಕುಗಳಲ್ಲಿ ಮೊದಲು ಜಾರಿ ಮಾಡಲಾಗುವುದು. ಇದು ಯಶಸ್ವಿಯಾದರೆ ಮುಂದಿನ ಹಂತದಲ್ಲಿ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಪರಮೇಶ್ವರ್‌ ತಿಳಿಸಿದ್ದಾರೆ.

ಶಕ್ತಿಯೋಜನೆಯಲ್ಲಿ ನಿತ್ಯ ಲಕ್ಷಾಂತರ ಮಹಿಳೆಯರು ಬಸ್‌ನಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಆಧಾರ್‌ ಕಾರ್ಡ್‌ ತೋರಿಸುವ ಬದಲು ಸ್ಮಾರ್ಟ್‌ ಕಾರ್ಡ್‌ ನೀಡುವುದಕ್ಕೆ ಸಚಿವ ಸಂಪುಟ ಸಭೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ.

ವಿದ್ಯಾರ್ಥಿಗಳಲ್ಲಿ ನಾಯಕತ್ವ ಮೌಲ್ಯಗಳನ್ನು ಬೆಳೆಸಲು ಸರಕಾರ ಮುಂದಾಗಿದೆ. ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸಚಿವ ಸಂಪುಟ ಅಸ್ತು ಎಂದಿದೆ.

10 ಜಿಲ್ಲೆಗಳಲ್ಲಿ ಉದ್ಯೋಗ ನಿಧಿ ಯೋಜನೆ ಜಾರಿಗೆ ನಿರ್ಣಯ ಕೈಗೊಳ್ಳಲಾಗಿದೆ. ಹೊಸದಾಗಿ ಉದ್ಯೋಗ ಸೃಷ್ಟಿಸುವ ಕಂಪನಿಗಳ ಮಾಲೀಕರಿಗೆ, ಪ್ರತಿ ಉದ್ಯೋಗಿಯ ಮೇಲೆ ಮಾಸಿಕ ರೂ.2500 ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ.