ಪುತ್ತೂರು: ವಂದೇ ಮಾತರಂ ಗೀತೆಯೂ ಏಕತೆಯನ್ನು ಸಾರುವುದರ ಜೊತೆಗೆ ಜನರಲ್ಲಿ ಪ್ರೇರಣೆಯನ್ನು ಮೂಡಿಸುತ್ತದೆ. ಇದರ ನಿರ್ಮಾತೃ ಬಂಕಿಮ ಚಂದ್ರ ಚಟರ್ಜಿ. ಯಾವುದೇ ಜಾತಿ, ಬೇಧವಿಲ್ಲದೆ ರೂಪಿಸಿದ ಈ ವಂದೇ ಮಾತರಂ ಗೀತೆಯು ಬ್ರಿಟಿಷರ ಆಳ್ವಿಕೆಯನ್ನು ಅಂತ್ಯಗೊಳಿಸುವ ಉದ್ದೇಶದಿಂದ ಬಂಗಾಳ ವಿಭಜನೆಯ ವಿರೋಧವಾಗಿ ವಂಗ ಭಂಗ ಚಳವಳಿಯ ಧ್ಯೇಯ ಗೀತೆಯಾಗಿ ಮೂಡಿಬಂದ ಗೀತೆಯಿದು. ಕೊಲ್ಕತ್ತಾದಿಂದ ಹೊರಟ ಹೋರಾಟದ ಗೀತೆ ವಿಶ್ವಾದ್ಯಂತ ವ್ಯಾಪಿಸಿತು ಮತ್ತು ಯುಗಾಂತರ ಸಂಘಟನೆಯ ಆರಂಭಕ್ಕೆ ಮುಂದಡಿಯಿಟ್ಟಿತು. ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಈ ಜಯಘೋಷವನ್ನು ಕೂಗಿದರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಪ್ರಚಾರ ಪ್ರಮುಖ್ ರಾಜೇಶ ಪದ್ಮಾರ್ ಹೇಳಿದರು.
Sponsoredಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ನಡೆದ ವಂದೇ ಮಾತರಂ 150ನೇ ವರ್ಷದ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಮಾತನಾಡಿ, ಸಮಾಜದ ಪ್ರತಿಯೊಂದು ಸ್ಥರಗಳಲ್ಲೂ ವಂದೇ ಮಾತರಂ ಕುರಿತು ಜಾಗೃತಿ ಮೂಡಬೇಕು ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ಅಧ್ಯಯನ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ಬಿ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ವಿಶೇಷ ಅಧಿಕಾರಿ ಹಾಗೂ ಅರ್ಥಶಾಸ್ತç ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ವಂದಿಸಿ, ಪ್ರಥಮ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ದೀಕ್ಷಾ ಜೆ.ರೈ ನಿರೂಪಿಸಿದರು.




