Home News Gujarath : ಅತ್ಯಾಚಾರಿಗಳಿಗೆ ಶಿಕ್ಷಯಾಗಲೆಂದು ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ – ಜಾಥಾ ಹೊರಟವರಿಗೆ ಟ್ರಕ್ ಡಿಕ್ಕಿ,...

Gujarath : ಅತ್ಯಾಚಾರಿಗಳಿಗೆ ಶಿಕ್ಷಯಾಗಲೆಂದು ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ – ಜಾಥಾ ಹೊರಟವರಿಗೆ ಟ್ರಕ್ ಡಿಕ್ಕಿ, ಇಬ್ಬರು ಸಾವು

Hindu neighbor gifts plot of land

Hindu neighbour gifts land to Muslim journalist

Gujarath : ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರ ತಂಡಕ್ಕೆ ಟ್ರಕ್ ಡಿಕ್ಕಿ ಹೊಡೆದು, ಇಬ್ಬರು ಮೃತಪಟ್ಟ ಘಟನೆ ಗುಜರಾತಿನಲ್ಲಿ ನಡೆದಿದೆ.

ಹೌದು, ಗುಜರಾತಿನಲ್ಲಿ ಒಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಐವರು ವಿರಾಮದ ವೇಳೆ ವಿಶ್ರಾಂತಿ ಪಡೆಯುತ್ತಿದ್ದ ಓಮ್ನಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಗುಜರಾತ್ ನ ಸೂರತ್ ನಿಂದ 200 ಕಿ.ಮಿ. ದೂರದಲ್ಲಿ ಬುಧವಾರ ಮಧ್ಯಾಹ್ನ 2 ರ ಸುಮಾರಿಗೆ ಅಪಘಾತ ನಡೆದಿದ್ದು ಮೃತಪಟ್ಟವರ ಪೈಕಿ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ಮೂಸಾ ಶರೀಫ್ ಎಂದು ಗುರುತಿಸಲಾಗಿದೆ. ಇನ್ನೊಬ್ಬರು ಪ್ರವೀಣ್ ಎನ್ನಲಾಗಿದೆ. ದಾರಿ ಮಧ್ಯೆ ರಸ್ತೆ ಬದಿ ಕಾರಿನಲ್ಲಿದ್ದಾಗ ಟ್ರಕ್ ಢಿಕ್ಕಿ ಹೊಡೆದು, ಮೂಸಾ ಶರೀಫ್, ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದು ಟ್ರಕ್ ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಮೂಸಾ ಶರೀಫ್ ಅವರ ಜೊತೆ ನೌಫಲ್ ಅಬ್ಬಾಸ್, ಬಾಲಕೃಷ್ಣ, ಹಂಝ ಮತ್ತು ಪ್ರವೀಣ್ ಅವರಿದ್ದರು ಎಂದು ತಿಳಿದು ಬಂದಿದೆ.

ಅಂದಹಾಗೆ ಕೆ ಆರ್ ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಸಾಮಾಜಿಕ ಹೋರಾಟಗಾರ ಮೂಸಾ ಶರೀಫ್ ಕರ್ನಾಟಕ ಸಾರಥಿಗಳ ಟ್ರೇಡ್ ಯೂನಿಯನ್ ಮುಖಂಡರು. ದೇಶದಲ್ಲಿ ನಡೆಯುತ್ತಿರುವ ʼಬೇಟಿ ಬಚಾವೋ ಬೇಟಿ ಪಡಾವೋʼ ಅಭಿಯಾನದ ಮಧ್ಯೆ ಕಳವಳಕಾರಿಯಾಗಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಐವರು ಕಾಲ್ನಡಿಗೆ ಜಾಥಾ ಹೊರಟಿದ್ದರು.