ಭಾನುವಾರ, 25 ಅಕ್ಟೋಬರ್ 2026
Trending

ರಾಜ್ಯದಲ್ಲಿ 32 ಮಂದಿಗೆ ಕೊರೋನಾ ಪಾಸಿಟಿವ್!!

ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿಯೂ ಇದು ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ.

Sponsored

 ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಈಗಾಗಲೇ ಎಂಟು ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಇಬ್ಬರು ಸಾವನ್ನಪ್ಪಿದ್ದರು. ಇತ್ತ ಕರ್ನಾಟಕದಲ್ಲೂ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಜೂನ್ ತಿಂಗಳ ಅವಧಿಯಲ್ಲಿ ಕೇವಲ 14 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಆದರೆ ಜುಲೈ ತಿಂಗಳ ಕಳೆದ ಕೇವಲ ಹತ್ತು ದಿನಗಳಲ್ಲೇ ಈ ಸಂಖ್ಯೆ 32ಕ್ಕೆ ತಲುಪಿದೆ. ಒಟ್ಟು 193 ಶಂಕಿತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಈ 32 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಇಲಾಖೆಯ ಆಯುಕ್ತರಾದ ಗುರುದತ್ ಹೆಗಡೆ ಅವರು, ಆಂಧ್ರಪ್ರದೇಶದ ಕಡಪಾದಲ್ಲಿ ಸಂಭವಿಸಿರುವ ಸಾವುಗಳು ಸದ್ಯಕ್ಕೆ ಶಂಕಿತ ಪ್ರಕರಣಗಳಾಗಿದ್ದು, ಈ ಬಗ್ಗೆ ಅಲ್ಲಿನ ಸರ್ಕಾರದೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.