Home News Drought Relief Funds: ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ !!

Drought Relief Funds: ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ !!

Drought Relief Funds

Hindu neighbor gifts plot of land

Hindu neighbour gifts land to Muslim journalist

Drought Relief Funds: ಭಾರತ ಸರ್ಕಾರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ (Drought Relief Funds) ಘೋಷಣೆ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ:  Vampire Facial: ಹುಡುಗಿಯರೇ ಹುಷಾರ್ !! ಫೇಶಿಯಲ್ ಮಾಡಿಸಿಕೊಂಡ 3 ಮಹಿಳೆಯರಲ್ಲಿ ‘ಏಡ್ಸ್’ ಪತ್ತೆ

ಬರ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಗೌರ್ಮೆಂಟ್ ಸುಪ್ರೀಂ ಕೋರ್ಟ್‌(Supreme Court) ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಚಾಟಿ ಬೀಸಿದ ನಂತರ, ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ.

ಇದನ್ನೂ ಓದಿ:  IPL-2024 Punjab vs KKR: IPL ನಲ್ಲಿ ಇತಿಹಾಸ ಸೃಷ್ಟಿಸಿದ ಪಂಜಾಬ್ ಕಿಂಗ್ಸ್ : ಅತಿ ಹೆಚ್ಚು ರನ್ ಚೇಸ್ ಮಾಡಿ ಟಿ20ಯಲ್ಲಿ ವಿಶ್ವದಾಖಲೆ

ಅಂದಹಾಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ (Karnataka Government) ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ರೂ. ಹಣದ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನ (Supreme Court of India) ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್‍ಗೆ ಹೇಳಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ. ಈ ಮೂಲಕ ಕರ್ನಾಟಕ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವಿನ ಬರ ಪರಿಹಾರ ಫೈಟ್ ಒಂದು ಮಟ್ಟಕ್ಕೆ ಮುಕ್ತಾಯದ ಹಂತ ತಲುಪಿದೆ.

ಕರ್ನಾಟಕ ಸರ್ಕಾರವು ಎಷ್ಟೇ ಕೇಳಿದರೂ ಕೇಂದ್ರ ಸರ್ಕಾರ ನಯಾ ಪೈಸೆ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಕೇಂದ್ರದ ಧೋರಣೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ರಾಜ್ಯದ ವಾದವನ್ನು ಅಲಿಸಿದ್ದ ಸುಪ್ರೀಂ ಕೋರ್ಟ್‌, “ರಾಜ್ಯ ಮತ್ತು ಕೇಂದ್ರಗಳ ಸಂಬಂಧ ಉತ್ತಮವಾಗಿರಬೇಕು. ರಾಜ್ಯಗಳು ಎಲ್ಲ ವಿಷಯಗಳಿಗೂ ಸುಪ್ರೀಂ ಕೋರ್ಟ್‌ಗೆ ಬರುವಂತಾಗಬಾರದು” ಎಂದು ಕೇಂದ್ರಕ್ಕೆ ಸೂಚನೆ ನೀಡಿತ್ತು. ಈ ಬೆನ್ನಲ್ಲೇ, ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ.

ಸಚಿವರ ಅಸಮಾಧಾನ:

ನಾವು 18,000 ಕೋಟಿಗೆ ಮನವಿ ಸಲ್ಲಿಸಿದ್ದೆವು. ಸಮಸ್ಯೆ ಗಂಭೀರವಾಗಿರುವ ಆಧಾರದ ಮೇಲೆ ಪರಿಹಾರ ಕೇಳಿದ್ದೆವು. ಈಗ 3,400 ಕೋಟಿಯಷ್ಟು ಹಣ ಕೊಟ್ಟಿದ್ದಾರೆ. ಅಲ್ಪ ಪ್ರಮಾಣದ ಹಣ ಕೊಟ್ಟು ಮಲತಾಯಿ ಧೋರಣೆ ಮಾಡಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.