Home News Waqf Board: ವಕ್ಫ್ ಬೋರ್ಡ್ ವಿರುದ್ಧವೇ ದಂಗೆ ಎದ್ದಿರುವ 60 ಮುಸ್ಲಿಂ ಕುಟುಂಬಗಳು! ಅಷ್ಟಕ್ಕೂ ಇವರ...

Waqf Board: ವಕ್ಫ್ ಬೋರ್ಡ್ ವಿರುದ್ಧವೇ ದಂಗೆ ಎದ್ದಿರುವ 60 ಮುಸ್ಲಿಂ ಕುಟುಂಬಗಳು! ಅಷ್ಟಕ್ಕೂ ಇವರ ಸಮಸ್ಯೆ ಏನು?!

Hindu neighbor gifts plot of land

Hindu neighbour gifts land to Muslim journalist

ಬೆಳಗಾವಿ ಜಿಲ್ಲೆಯ ಅಥಣಿ (Athani) ತಾಲೂಕಿನ ಅನಂತಪುರ ಗ್ರಾಮದಲ್ಲಿ ವಕ್ಫ್ ಬೋರ್ಡ್ (Waqf Board) ವಿರುದ್ಧ ಈಗ ಮುಸ್ಲಿಂ ಸಮುದಾಯವೇ (Muslim Community) ತಿರುಗಿಬಿದ್ದಿದೆ. ಹೌದು, ಅನಂತಪುರ ಗ್ರಾಮದ ದರ್ಗಾದಲ್ಲಿ ಸಭೆ ಮಾಡಿದ ರೈತರು, ಕಾಗವಾಡ ಹಾಗೂ ಅಥಣಿ ಶಾಸಕರಿಗೆ ಬರುವ ನವೆಂಬರ್‌ 25ರ ಒಳಗಾಗಿ ಅನಂತಪುರ, ಬಳ್ಳಿಗೇರಿ ಗ್ರಾಮದ 60 ಕ್ಕೂ ಅಧಿಕ ಜನ ರೈತರ ಜಮೀನಿನ (Farmers Land) ಪಹಣಿಯಲ್ಲಿ ನೊಂದಣಿಯಾದ ವಕ್ಫ್‌ ಹೆಸರು ತೆರವುಗೊಳಿಸಬೇಕು ಎಂದು ಗಡುವು ನೀಡಿದ್ದಾರೆ. ಒಂದು ವೇಳೆ ಇಬ್ಬರು ಶಾಸಕರು ಸ್ಪಂದಿಸದೇ ಇದ್ದರೆ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಮಾಡುವುದಾಗಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.

2018 ರಲ್ಲಿ ರೈತರ ಜಾಗದ ಪಹಣಿಯಲ್ಲಿ ಇದ್ದಕ್ಕಿದ್ದಂತೆ ವಕ್ಫ್ ಎಂದು 60ಕ್ಕೂ ಹೆಚ್ಚು ಮುಸ್ಲಿಂ ಹಾಗೂ ಇನ್ನುಳಿದ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ವಕ್ಫ್ ಹೆಸರು ಸೇರ್ಪಡೆಯಿಂದ ಸಾಲ ಸೌಲಭ್ಯ ಸಿಗುತ್ತಿಲ್ಲ. ಸರ್ಕಾರ ಯೋಜನೆಯಿಂದ ನಾವು ವಂಚಿತರಾಗಿದ್ದೇವೆ. ಆದಷ್ಟು ಬೇಗನೆ ಪಹಣಿಯಲ್ಲಿ ವಕ್ಫ್ ಹೆಸರು ತೆರವು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇಲ್ಲಿಯವರೆಗೆ ತಹಶೀಲ್ದಾರ್ ಕಚೇರಿ ಅಲೆದಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಅವಧಿಯಲ್ಲಿ ನೀಡಲಾದ ನೋಟಿಸ್ ಮರಳಿ ಪಡೆಯಲು ತಿಳಿಸಿದ್ದಾರೆ. ಆದರೆ ಈ ಹಿಂದೆ ನೋಟಿಸ್‌ ಬಂದಿರುವ ನಮ್ಮ ಪಾಡೇನು? ನಾವು ಯಾರನ್ನು ಕೇಳಬೇಕು? ನಮಗೆ ನ್ಯಾಯ ಕೊಡಿಸುವವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.