Home News ಸೇಬು ಹಣ್ಣಲ್ಲಿ ಮತ್ತಿನ ಔಷಧ ಬೆರೆಸಿ ಮಕ್ಕಳ ಮೇಲೆ ರೇಪ್ | ಮುರುಘಾಶ್ರೀ ವಿರುದ್ದ 694...

ಸೇಬು ಹಣ್ಣಲ್ಲಿ ಮತ್ತಿನ ಔಷಧ ಬೆರೆಸಿ ಮಕ್ಕಳ ಮೇಲೆ ರೇಪ್ | ಮುರುಘಾಶ್ರೀ ವಿರುದ್ದ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!!!

Hindu neighbor gifts plot of land

Hindu neighbour gifts land to Muslim journalist

ಚಿತ್ರದುರ್ಗದಲ್ಲಿನ ಮುರುಘಾ ಮಠದ ಶ್ರೀಗಳ ವಿರುದ್ಧ ಇದೀಗ 2ನೇ ಪೋಕ್ಸೋ ಕೇಸ್ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಸಿರುವ ಡಿವೈಎಸ್ಪಿ ಅನಿಲ್ ನೇತೃತ್ವದ ತಂಡ 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ.

ಪೋಕ್ಸೋ, ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆಯ ಅಡಿಯಲ್ಲಿ ಕೇಸ್ ದಾಖಲಾಗಿದೆ. ಹಾಗೂ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಮುರುಘಾಶ್ರೀ, ಲೇಡಿ ವಾರ್ಡನ್ (ರಶ್ಮಿ), ಕಾರ್ಯದರ್ಶಿ ಪರಮಶಿವಯ್ಯ ಹಾಗೂ ಮಠದ ಉತ್ತರಾಧಿಕಾರಿ ಇವರೆಲ್ಲರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಆದರೆ ವಕೀಲ ಗಂಗಾಧರಯ್ಯ ಭಾಗಿಯಾಗಿರುವ ಮಾಹಿತಿ ದೊರಕಿಲ್ಲ. ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುರುಘಾಶ್ರೀ, ಲೇಡಿ ವಾರ್ಡನ್ ಮುಖಾಂತರ ಮಕ್ಕಳನ್ನು ಕರೆಸಿ ನಿರಂತರ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಿದ್ದರು. ಈ ಕಾರ್ಯಕ್ಕೆ ಮತ್ತಿನ ಔಷಧಿ ಬೆರೆಸಿದ ಸೇಬು ಹಣ್ಣನ್ನು ಬಳಸುತ್ತಿದ್ದರು. ಇದನ್ನು ಮಕ್ಕಳಿಗೆ ನೀಡಿ ಅತ್ಯಾಚಾರ ನಡೆಸುತ್ತಿದ್ದರು. ಹಾಗೂ ಕಚೇರಿ, ಬೆಡ್ ರೂಂ, ಬಾತ್ ರೂಂ ಗೆ ಕರೆದೊಯ್ದು ಬಲಾತ್ಕಾರ ಮಾಡಿದ್ದಾರೆ. ಇದನ್ನು ವಿರೋಧಿಸಿದ ಮಕ್ಕಳಿಗೆ ಜೀವ ಬೆದರಿಕೆ ಹಾಕುತ್ತಿದ್ದರು. ಹೀಗೇ ಸುಮಾರು ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ರೇಪ್ ಮಾಡಿರುವ ಆರೋಪ ಕೇಳಿ ಬಂದಿದೆ. ಇಷ್ಟಲ್ಲದೆ, ಕೆಲ ವರ್ಷಗಳ ಹಿಂದೆ ಒಬ್ಬ ಬಾಲಕಿ ರೇಪ್ ಅಂಡ್ ಮರ್ಡರ್ ಸಹ ಆಗಿದ್ದಾಳೆ ಎಂದು ವರದಿಯಾಗಿದೆ.

ಈ ಬಗ್ಗೆ ಸಂತ್ರಸ್ತ ಬಾಲಕಿಯರಿಂದ ಹೇಳಿಕೆ ಪಡೆದುಕೊಂಡು ಆಂಧ್ರಕ್ಕೆ ತೆರಳಿದ್ದ ಪೊಲೀಸ್ ತಂಡವು ಹಲವಾರು ಮಾಹಿತಿಗಳನ್ನು ಕಲೆ ಹಾಕಿದೆ. ಮಠದ ಹಾಸ್ಟೆಲ್ ನಲ್ಲಿದ್ದ ಮಕ್ಕಳ ವಿಚಾರಣೆ ನಡೆಯುತ್ತಿದೆ. ಮುರುಘಾಶ್ರೀಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.