Home Karnataka State Politics Updates ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ದಿ : ಅಕ್ಟೋಬರ್ ತಿಂಗಳಲ್ಲಿ 7 ನೇ ವೇತನ ಆಯೋಗ...

ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ದಿ : ಅಕ್ಟೋಬರ್ ತಿಂಗಳಲ್ಲಿ 7 ನೇ ವೇತನ ಆಯೋಗ ರಚನೆ: ಸಿಎಂ ಬೊಮ್ಮಾಯಿ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು.

ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಈ ಸಮಾರಂಭದಲ್ಲಿ ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.

ರಾಜ್ಯ ಸರ್ಕಾರಿ ನೌಕರರ ವಿವಿಧ ಇಲಾಖೆ ಮತ್ತು ವೃಂದ ಸಂಘಟನೆಗಳ ಒಕ್ಕೂಟದ ಜಂಟಿ ಕ್ರಿಯಾ ಸಮಿತಿ ವೇತನ ಆಯೋಗ ರಚನೆಗೆ ಒತ್ತಾಯಿಸಿದ್ದು, ಇದೊಂದು ಸಿಹಿ ಸುದ್ದಿ ಎಂದೇ ಹೇಳಬಹುದು.