ಭಾನುವಾರ, 25 ಅಕ್ಟೋಬರ್ 2026
Trending

80ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಇದರೊಂದಿಗೆ ಅವರು ಪ್ರಧಾನಿಯಾಗಿ ಸತತ 13ನೇ ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದಂತಾಗಿದೆ.

Sponsored


ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು. ನಂತರ ಭಾರತೀಯ ಸೇನೆಯ ವತಿಯಿಂದ 21 ಗನ್‌ಗಳ ಗೌರವ ವಂದನೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ವಾಯುಪಡೆಯ ಹೆಲಿಕಾಪ್ಟರ್‌ಗಳ ಮೂಲಕ ಪುಷ್ಪವೃಷ್ಟಿ ನಡೆಸಿ ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲಾಯಿತು.
ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ಮೋದಿ ಅವರು ರಾಜ್‌ಘಾಟ್‌ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆಗೆ ಆಗಮಿಸಿದ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಹಾಗೂ ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಬರಮಾಡಿಕೊಂಡರು.
ಕೆಂಪುಕೋಟೆಯಲ್ಲಿ ಸೇನಾ ಗೌರವ ಸ್ವೀಕರಿಸಿದ ಬಳಿಕ ಪ್ರಧಾನಿ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಸ್ವಾತಂತ್ರ್ಯೋತ್ಸವದ ಭಾಷಣ ಮಾಡಿದರು. ದೇಶದ ಅಭಿವೃದ್ಧಿ, ಭದ್ರತೆ, ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಗುರಿಗಳ ಕುರಿತು ಅವರು ತಮ್ಮ ಸಂದೇಶವನ್ನು ಹಂಚಿಕೊಂಡರು.