ಭಾನುವಾರ, 25 ಅಕ್ಟೋಬರ್ 2026
Trending

ರಾಜ್ಯದಲ್ಲಿ 911 ಅಕ್ರಮ ನುಸುಳುಕೋರರ ಪತ್ತೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 911 ಅಕ್ರಮ ನುಸುಳುಕೋರರನ್ನು ಪತ್ತೆಹಚ್ಚಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ.ಪತ್ತೆಯಾದವರಲ್ಲಿ 868 ಮಂದಿ ಬಾಂಗ್ಲಾದೇಶ, 20 ಮಂದಿ ಪಾಕಿಸ್ತಾನ, 13 ಮಂದಿ ನೈಜೀರಿಯಾ, 8 ಮಂದಿ ಶ್ರೀಲಂಕಾ ಹಾಗೂ ಮ್ಯಾನ್ಮಾರ್ ಮತ್ತು ಉಗಾಂಡಾದ ತಲಾ ಒಬ್ಬರು ಸೇರಿದ್ದಾರೆ.

Sponsored


ಬೆಂಗಳೂರು ನಗರ ಜಿಲ್ಲೆಯಲ್ಲಿ 5,304 ವಿದೇಶಿಗರು ಮಾನ್ಯ ವೀಸಾ ಹೊಂದಿದ್ದು, 446 ಮಂದಿ ವೀಸಾ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ. ಇವರ ವಿವರಗಳನ್ನು FRROಗೆ ಕಳುಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದೇ ವೇಳೆ, ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಶಾಸಕಿ ನಯನಾ ಮೋಟಮ್ಮ ಆಗ್ರಹಿಸಿದ್ದು, ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪಿಂಚಣಿ ನೀಡುವಂತೆ ಶಾಸಕರು ಮನವಿ ಮಾಡಿದ್ದಾರೆ.