ವಸತಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಖಾಸಗಿ ಟ್ಯೂಟರ್ ಒಬ್ಬನನ್ನು ಶುಕ್ರವಾರ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ ಘಟನೆ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ನಡೆದಿದೆ.
Sponsoredಶಾಲೆಯಲ್ಲಿ ಈ ವಾರ ನಡೆದ ಸಾಮಾನ್ಯ ಆರೋಗ್ಯ ತಪಾಸಣೆಯ ಸಮಯದಲ್ಲಿ ವಿದ್ಯಾರ್ಥಿನಿ ಐದು ತಿಂಗಳ ಗರ್ಭಿಣಿ ಎಂಬ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ಎಚ್ಚೆತ್ತ ಶಾಲಾ ಆಡಳಿತ ಮಂಡಳಿಯು ಈ ವಿಷಯವನ್ನು ಆಕೆಯ ಪೋಷಕರಿಗೆ ತಿಳಿಸಿದೆ. ಆಗ ಮನೆಯಲ್ಲಿ ಪೋಷಕರು ಮಗಳೊಂದಿಗೆ ವಿಚಾರಿಸಿದಾಗ ಬೇಸಿಗೆ ರಜೆಯ ಸಮಯದಲ್ಲಿ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಬಂದ ಬೆದರಿಕೆಯ ಬಗ್ಗೆ ಆಕೆ ಸತ್ಯ ಬಿಚ್ಚಿಟ್ಟಿದ್ದಾಳೆ.
Marriage AdSponsoredಬೇಸಿಗೆ ರಜೆಯ ಅವಧಿಯಲ್ಲಿ ಆಕೆಗೆ ಮನೆಯಲ್ಲಿ ಪಾಠ ಹೇಳಿಕೊಡಲು ಖಾಸಗಿ ಟ್ಯೂಟರ್ ಒಬ್ಬನನ್ನು ನೇಮಿಸಲಾಗಿತ್ತು. ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದೆ ಒಂಟಿಯಾಗಿದ್ದ ಸಮಯವನ್ನು ದುರುಪಯೋಗಪಡಿಸಿಕೊಂಡ ಆರೋಪಿಯು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ ಮುಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದ.
ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ಪೋಷಕರು ಗುರುವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಥಮ ಮಾಹಿತಿ ವರದಿ (FIR) ದಾಖಲಿಸಿಕೊಂಡು ಆರೋಪಿ ಟ್ಯೂಟರ್‌ನನ್ನು ಬಂಧಿಸಿದ್ದಾರೆ.




