ಸೋಮವಾರ, 26 ಅಕ್ಟೋಬರ್ 2026
Trending

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ

ಮೂರು ವರ್ಷದ ಮಗುವನ್ನು ಬಿಟ್ಟು ದಂಪತಿ ಬ್ರಿಡ್ಜ್‌ ಮೇಲಿಂದ ನದಿಗೆ ಹಾರಿದ್ದು, ಮಗು ಅನಾಥವಾಗಿದೆ.

Sponsored

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ವೆಲ್ಪುರು ಗ್ರಾಮದ ನಿವಾಸಿಗಳಾದ ಪತಿ ದೊಡ್ಡ ಸಾಯಿ (29) ಮತ್ತು ಅವರ ಪತ್ನಿ ಶಿರೀಷಾ (28) ನದಿಗೆ ಹಾರಿದ ದಂಪತಿ ಎಂದು ಗುರುತಿಸಲಾಗಿದೆ.

ರಾತ್ರಿ 10 ಗಂಟೆ ಸುಮಾರಿಗೆ ದಂಪತಿಯು ಮಗುವಿನೊಂದಿಗೆ ಸ್ಕೂಟರ್‌ನಲ್ಲಿ ಸೇತುವೆ ಬಳಿ ಬಂದಿದ್ದು, ನಂತರ ಮಗುವನ್ನು ಸ್ಕೂಟರ್‌ ಮೇಲೆಯೇ ಬಿಟ್ಟು ಗೋದಾವರಿ ನದಿಗೆ ಹಾರಿದ್ದಾರೆ ಎಂದು ಶಂಕಕಿಸಲಾಗಿದೆ. ಕತ್ತಲು ಹಾಗೂ ಚಳಿ ಮಧ್ಯೆ ಮಗು ಒಂಟಿಯಾಗಿ ಸೇತುವೆ ಮೇಲೆ ಅಳುತ್ತಿರುವುದನ್ನು ಗಮನಿಸಿದ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಗು ಅಪ್ಪ ಅಮ್ಮ ಕರೆಯುತ್ತಿದ್ದು, ಸ್ಥಳೀಯರು ಪೋಷಕರಿಗೆ ಹುಡುಕಾಟ ಮಾಡಿದ್ದಾರೆ. ನಂತರ ಪೊಲೀಸರು ಘಟನಾ ಸ್ಥಳಕ್ಕೆ ಬಂದಿದ್ದು, ಮಗುವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಸ್ಕೂಟರ್‌ನ್ನು ಜಪ್ತಿ ಮಾಡಿದ್ದಾರೆ. ನಂತರ ಮಗುವನ್ನು ಕುಟುಂಬದ ಸದಸ್ಯರಿಗೆ ಒಪ್ಪಿಸಲಾಗಿದೆ.

ದಂಪತಿಗಳ ಶೋಧ ಕಾರ್ಯ ಆರಂಭ ಮಾಡಲಾಗಿದ್ದು, ಪೊಲೀಸ್‌ ಸಿಬ್ಬಂದಿ, ಈಜುಗಾರರು, ದೋಣಿ ತಂಡಗಳು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ತಂದೆ ಡ್ರೈವರ್‌ ಕೆಲಸ ಮಾಡುತ್ತಿದ್ದು, ಆಂಧ್ರಪ್ರದೇಶಕ್ಕೆ ಹಿಂತಿರುಗುವ ಮೊದಲು ಗಲ್ಫ್‌ನಲ್ಲಿದ್ದರು. ಸಾಲದ ಹೊರೆ ಮತ್ತು ಹಣಕಾಸಿನ ಒತ್ತಡದಿಂದ ಬಳಲುತ್ತಿದ್ದು, ಅಲ್ಲದೇ ಆರ್ಥಿಕ ಸಮಸ್ಯೆಯ ಕಾರಣದಿಂದಲೇ ದಂಪತಿ ತಮ್ಮ ಮನೆಯನ್ನು ಮಾರಾಟ ಮಾಡಲು ನಿರ್ಧಾರ ಮಾಡಿದ್ದರು ಎಂದು ತನಿಖಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆಗೆ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.