Home News Puttur: ಪುತ್ತೂರು: ಜಿಲ್ಲೆಯಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆ ಮುಚ್ಚುವಿಕೆ: ಶಾಮೀಲಾದವರ ವಿರುದ್ದ ತನಿಖೆಗೆ ಕನ್ನಡ...

Puttur: ಪುತ್ತೂರು: ಜಿಲ್ಲೆಯಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆ ಮುಚ್ಚುವಿಕೆ: ಶಾಮೀಲಾದವರ ವಿರುದ್ದ ತನಿಖೆಗೆ ಕನ್ನಡ ಸೇನೆ ಆಗ್ರಹ

Hindu neighbor gifts plot of land

Hindu neighbour gifts land to Muslim journalist

Puttur :ದ.ಕ. ಜಿಲ್ಲೆಯ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳ ಪೈಕಿ ಸುಮಾರು 24 ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚದಂತೆ ಕ್ರಮ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಕನ್ನಡ ಸೇನೆ  ಶನಿವಾರ ಮನವಿ ಮಾಡಿದೆ.

ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಚಂದ್ರಶೇಖರ ಎ.  ಮನವಿ ಮಾಡಿ, “ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ದೇರೇಬೈಲ್ ಚರ್ಚ್ ಬಳಿಯ ಹೋಲಿ ಫ್ಯಾಮಿಲಿ ಹಿರಿಯ ಪ್ರಾಥಮಿಕ ಶಾಲೆಯನ್ನು ಈಗಾಗಲೇ ಮುಚ್ಚಲಾಗಿದೆ. ಸ್ಪಷ್ಟತೆಯಿಲ್ಲದೆ ಏಕಾಏಕಿ ಮುಚ್ಚಿದ್ದು, ಈ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ಕನ್ನಡ ಅಭಿಮಾನಿಗಳಿಗೆ ಅಘಾತವಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ, ಕನ್ನಡ ವಿರೋಧಿ ನಡೆಯಿಂದಾಗಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವ ಯತ್ನ ನಡೆಯುತ್ತಿದೆ. ಅಗತ್ಯ ಶಿಕ್ಷಕರ ನೇಮಕ ಮಾಡದೆ ಶಾಲೆಗಳ ಮುಚ್ಚುವಿಕೆಗೆ ಕಾರಣವಾಗುತ್ತಿದೆ. ಸರಕಾರಕ್ಕೆ ಸುಳ್ಳು ಮಾಹಿತಿ ನೀಡಿ ಸರಕಾರಿ ಶಾಲೆಗಳನ್ನು ಮುಚ್ಚಲೆತ್ನಿಸುವ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕು,” ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.