

Belthangady: ಫೆ.14 ರಂದು ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ (Belthangady) ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.
ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ 10:30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು.
ಆದ್ರೆ ಹಿದಾಯತ್, ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಹೃದಯಘಾತ ಆಗಿದೆ. ತಕ್ಷಣ ಅವರನ್ನು ಅಲ್ಲಿನ ವಿಮಾನ ನಿಲ್ದಾಣದ ಪಕ್ಕದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅದಾಗಲೇ ಅವರು ಸಾವನ್ನಪ್ಪಿದ್ದರು.
ಇವರು ಅತ್ಯುತ್ತಮ ಹಿನ್ನಲೆ ಗಾಯಕರೂ ಆಗಿದ್ದ ಅವರು ಆರಂಭದಲ್ಲಿ ಉದ್ಯೋಗ ನಿಮಿತ್ತ ಬಹರೈನ್ ಗೆ ತೆರಳಿದ್ದವರು ಬಳಿಕ ಸೌದಿ ಅರೇಬಿಯಾಕ್ಕೆ ತೆರಳಿದ್ದು ಕಾರ್ಗೊ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.













