ಅತ್ಯಾಚಾರ ಆರೋಪದಡಿ ಜೀವಾವಧಿ ಶಿಕ್ಷೆಗೆ ಗುರಿ ಯಾಗಿರುವ ಪ್ರಜ್ವಲ್ ರೇವಣ್ಣ ಅವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆಯಾಗಿದ್ದು ಬಾರಿ ಚರ್ಚೆಗೆ ವಿಚಾರವಾಗಿದೆ. ಈ ಬಗ್ಗೆ ಇದೀಗ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಕುಮಾರಸ್ವಾಮಿಯವರಿಗೆ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಪತ್ತೆಯಾಗಿದೆ. ಈ ಬಗ್ಗೆ ಏನು ಹೇಳುತ್ತೀರಿ? ಸರ್ ಎಂಬ ಪ್ರಶ್ನೆ ಎದುರಾಗಿದೆ. ಇದಕ್ಕೆ ಅವರು ತುಂಬಾ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.
ಆ ಬಗ್ಗೆ ನನ್ನ ಬಳಿ ಪ್ರಶ್ನೆ ಕೇಳಬೇಡಿ, ಅದಕ್ಕೂ ನನಗೂ ಸಂಬಂಧವಿಲ್ಲ. ಅಲ್ಲದೆ ಆ ಕುರಿತ ಪ್ರಶ್ನೆಯನ್ನು ನನ್ನ ಬಳಿ ಯಾಕೆ ಕೇಳುತ್ತೀರಿ. ಅದಕ್ಕೆ ರಾಜ್ಯ ಸರ್ಕಾರ ಹೊಣೆಯಾಗುತ್ತದೆ. ಅಧಿಕಾರಿಗಳು ಇದ್ದಾರೆ ಅವರು ಏನು ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ಳುತ್ತಾರೆ. ಅದು ಯಾವುದು ನನಗೆ ಸಂಬಂಧಪಡುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.



