ಶನಿವಾರ, 24 ಅಕ್ಟೋಬರ್ 2026

ಬೆಳ್ತಂಗಡಿಯ ಮುಂಡಾಜೆ, ಕಲ್ಮಂಜದಲ್ಲಿ ದಾಖಲೆಯ ಮಳೆ!!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮುಂಡಾಜೆಯಲ್ಲಿ ದಾಖಲೆಯ ಮಳೆಯಾಗಿದೆ ಎಂದು ವರದಿಯಾಗಿದೆ. 

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಆಗಸ್ಟ್‌ 1 ಶನಿವಾರ ಬೆಳಗ್ಗೆ 8:30 ರಿಂದ ಆಗಸ್ಟ್‌ 2ರ 7:30ರ ವೇಳೆಗೆ 50 ಮಿ ಮೀಗಿಂತ ಹೆಚ್ಚು ಮಳೆಯಾದ ಸ್ಥಳಗಳ ವಿವರವನ್ನು ಪ್ರಕಟಿಸಿದ್ದು, ಮುಂಡಾಜೆಯಲ್ಲಿ (Mundaje) ದಾಖಲೆಯ 348.5 ಮಿ.ಮೀ ಮಳೆಯಾಗಿದ್ದರೆ, ಅದೇ ತಾಲೂಕಿನ ಕಲ್ಮಂಜದಲ್ಲಿ 283.5 ಮಿ.ಮೀ ಮಳೆಯಾಗಿದೆ ಎಂದು ಹೇಳಿದೆ.

ಮುಂಡಾಜೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಶನಿವಾರ ಭಾರೀ ಮಳೆಯಾಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರಮುಖ ನದಿ ಮತ್ತು ತೋಡುಗಳು ಮೈದುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.