ಕೋಲ್ಕತ್ತಾ ದುರ್ಗಾಪೂಜೆ ಪೆಂಡಾಲ್ ಕಾಲ್ತುಳಿತ, 19 ಸಾವು
ಉತ್ತರ ಕೊಲ್ಕತ್ತಾದ ಚೋರ್‌ಬಗಾನ್‌ನ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಈ ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದಾಗಿ ಸಿಎಂ ಸುವೇಂದು ಅಧಿಕಾರಿ ಭರವಸೆ ನೀಡಿದ್ದಾರೆ.
Sponsoredಇದೇ ವೇಳೆ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರ ಮತ್ತು ಗ್ರೂಪ್ ಡಿ ಶ್ರೇಣಿಯ ಸರಕಾರಿ ಉದ್ಯೋಗ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸಲಿದೆ. ಜೊತೆ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.




