ಶನಿವಾರ, 24 ಅಕ್ಟೋಬರ್ 2026

Tumakuru : ಒಬ್ಬ ವಿದ್ಯಾರ್ಥಿ ಮೇಲೆ 4 ಶಿಕ್ಷಕರಿಂದ ಹಲ್ಲೆ!!

Tumakuru : ಎಂಟನೇ ತರಗತಿ ವಿದ್ಯಾರ್ಥಿಯೊಬ್ಬನ ಮೇಲೆ ನಾಲ್ವರು ಶಿಕ್ಷಕರು ಸೇರಿ ಹಲ್ಲೆ ನಡೆಸಿರುವ ಘಟನೆ ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯಲ್ಲಿ ಸಂಭವಿಸಿದೆ. ಹಲ್ಲೆಯಿಂದ ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದ ನಿವಾಸಿಯಾದ ಸುಶಾಂತ್ ಎಂಬ ಎಂಟನೇ ತರಗತಿ ವಿದ್ಯಾರ್ಥಿ ವಿದ್ಯಾನಿಧಿ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತರಗತಿಯಲ್ಲಿ ಸಹಪಾಠಿಯೊಬ್ಬರ ಪುಸ್ತಕದ ಪುಟ ಹರಿದಿದ್ದಾನೆ ಎಂಬ ಕಾರಣ ಮುಂದಿಟ್ಟುಕೊಂಡು,  ನಾಲ್ವರು ಶಿಕ್ಷಕರು ಸೇರಿ ಸುಶಾಂತ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಶಿಕ್ಷಕರ ಹಲ್ಲೆಯಿಂದ ಸುಶಾಂತ್ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಶಾಲಾ ಸಿಬ್ಬಂದಿಯೇ ತಕ್ಷಣವೇ ಆತನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ವೈದ್ಯರ ಪ್ರಕಾರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸುಶಾಂತ್ ಪೋಷಕರು ಹಾಗೂ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿ, ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.