ಬೆಂಗಳೂರು ನಗರದ ಸ್ವಚ್ಛತಾ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ(ಬಿಎಸ್‌ಡಬ್ಲ್ಯೂಎಂಎಲ್) ಮಹತ್ವದ ಯೋಜನೆಯನ್ನು ರೂಪಿಸಿದೆ. ಇದರಡಿ ಬೆಂಗಳೂರಿನ ಸುಮಾರು 18 ಸಾವಿರ ಪೌರಕಾರ್ಮಿಕರನ್ನು ಕರ್ನಾಟಕದ ಆರು ನಗರಗಳಿಗೆ ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯಲು ನಿರ್ಧಾರ ಮಾಡಲಾಗಿದೆ.
Sponsoredಸ್ವಚ್ಛ ಭಾರತ್ ಮಿಷನ್ (ನಗರ) 2.0 ಯೋಜನೆಯಡಿಯಲ್ಲಿ ಹಂತ ಹಂತವಾಗಿ ಈ ಕಾರ್ಯಕ್ರಮ ಜಾರಿಯಾಗಲಿದ್ದು, ಇದೇ ತಿಂಗಳಲ್ಲಿ ಪ್ರವಾಸದ ಆರಂಭಗೊಳ್ಳುವ ನಿರೀಕ್ಷೆಯಿದೆ.
Marriage AdSponsoredಮೊದಲ ಹಂತದಲ್ಲಿ ಮೈಸೂರು, ದಾವಣಗೆರೆ ಮತ್ತು ಹೊಸಪೇಟೆ ಸೇರಿದಂತೆ ಘನತ್ಯಾಜ್ಯದ ಉತ್ತಮ ನಿರ್ವಹಣೆಗೆ ಹೆಸರಾಗಿರುವ ನಗರಗಳಿಗೆ ಪೌರಕಾರ್ಮಿಕರನ್ನು ಕರೆದುಕೊಂಡು ಹೋಗಲಾಗುತ್ತದೆ. ಬಳಿಕ ಉಳಿದ ನಗರಗಳಿಗೂ ಅಧ್ಯಯನ ಪ್ರವಾಸ ಆಯೋಜಿಸಲಾಗುತ್ತದೆ. ಸ್ವಚ್ಛ ಸರ್ವೇಕ್ಷಣೆಯಲ್ಲಿ ಉತ್ತಮ ಸಾಧನೆ ಮಾಡಿದ ನಗರಗಳ ತ್ಯಾಜ್ಯ ವಿಂಗಡಣೆ, ಮರುಬಳಕೆ, ಸ್ವಚ್ಛತೆ ನಿರ್ವಹಣೆ, ಸುರಕ್ಷತಾ ಕ್ರಮಗಳು ಹಾಗೂ ನಾಗರಿಕರ ಸಹಭಾಗಿತ್ವದ ಮಾದರಿಗಳನ್ನು ಪರಿಚಯಿಸುವುದು ಯೋಜನೆಯ ಉದ್ದೇಶವಾಗಿದೆ.




