ಕೇಂದ್ರ ಸರಕಾರವು ಕೈಗೊಂಡಿರುವ ಕ್ರಮಗಳ ಕುರಿತು ಸಿಜೆಪಿ ಸೆ.5 ರಂದು ಇಂಡಿಯಾ ಗೇಟ್‌ನಿಂದ ದೆಹಲಿ ಪೊಲೀಸ್ ಪ್ರಧಾನ ಕಚೇರಿಯವರೆಗೆ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ರದ್ದು ಮಾಡಿದೆ.
ಸಿಜೆಪಿ ಜಂಟಿ ಸಂಚಾಲಕ ಸೌರವ್ ದಾಸ್ ಈ ಬಗ್ಗೆ ಮಾತನಾಡಿದ್ದು, “ಭಾರತ ಸರ್ಕಾರದ ಭರವಸೆಗಳು, ನ್ಯಾಯಾಂಗದ ಪವಿತ್ರತೆ ಮತ್ತು ಈ ನ್ಯಾಯಾಲಯ ಹೊರಡಿಸಿದ ಆದೇಶವನ್ನು ಗಮನದಲ್ಲಿಟ್ಟುಕೊಂಡು, ಸಿಜೆಪಿಯು ಸೆಪ್ಟೆಂಬರ್ 5ರ ಮೆರವಣಿಗೆಯನ್ನು ಹಿಂಪಡೆಯುವುದು ಸೂಕ್ತವೆಂದು ಭಾವಿಸುತ್ತದೆ” ಎಂದು ತಿಳಿಸಿದರು.




