ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕೋಟಿಕೆರೆ ಎಂಬಲ್ಲಿ ನಡೆದಿದೆ.
ಮೃತರನ್ನು ವಿಟ್ಲ ಕಸಬಾ ದ ಗಾಳಿಹಿತ್ತು ನಿವಾಸಿ ವೀರಪ್ಪ ಗೌಡ ಎಂಬವರ ಪುತ್ರ ಎಸ್ ಸಿ ಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್(32) ಎಂದು ಗುರುತಿಸಲಾಗಿದೆ.
ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು ಸ್ಥಳೀಯರು ಕೂಡಲೇ ಮೇಲಕ್ಕೆತ್ತಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.



