Home News Central Government : ವಿಶ್ವಸಂಸ್ಥೆ ವರದಿ ಪ್ರಕಾರ ಅಡಿಕೆ ಕ್ಯಾನ್ಸರ್ ಕಾರಕ ಎಂಬ ವಿಚಾರ –...

Central Government : ವಿಶ್ವಸಂಸ್ಥೆ ವರದಿ ಪ್ರಕಾರ ಅಡಿಕೆ ಕ್ಯಾನ್ಸರ್ ಕಾರಕ ಎಂಬ ವಿಚಾರ – ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ!!

Hindu neighbor gifts plot of land

Hindu neighbour gifts land to Muslim journalist

Central Government : ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆಯೊಂದು ಅಡಿಕೆಯು ಬಾಯಿ ಕ್ಯಾನ್ಸರ್‌ ಕಾರಕ ಎಂಬ ವರದಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದು ಬೆಳೆಗಾರರ ಆತಂಕವನ್ನು ಹೆಚ್ಚಿಸಿದೆ. ಇತ್ತ ಅಡಿಕೆ ಮಾರಾಟ ಸಹಕಾರ ಸಂಘ, ಒಕ್ಕೂಟಗಳು ಕೆಂಡವಾಗಿ ವರದಿಯನ್ನು ಒಪ್ಪುವುದಿಲ್ಲ ಎಂದು ಹೇಳಿವೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರ(Central Government) ಮಹತ್ವದ ನಿರ್ಧಾರ ಮಾಡಿದ್ದು ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾಗಿದೆ.

ಮಲೆನಾಡು ಮತ್ತು ಕರಾವಳಿ ಭಾಗದ ಸಾಂಪ್ರದಾಯಿಕ ಬೆಳೆಯಾದ ಅಡಿಕೆ ಕುರಿತು ವಿಶ್ವಸಂಸ್ಥೆ ಈ ರೀತಿಯ ಒಂದು ಗೊಂದಲಮಯವಾದ ವರದಿಯನ್ನು ಬಿಡುಗಡೆ ಮಾಡಿದ ಬಳಿಕ, ಇದರ ಬಗ್ಗೆ ಮಾಹಿತಿಯ ಕೊರತೆಯ ಪರಿಹಾರ ಹಾಗೂ ಅದು ಆರೋಗ್ಯದ ಮೇಲೆ ಬೀರುವ ಪರಿಣಾಮವನ್ನು ಅರಿತುಕೊಳ್ಳಲು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ಅಡಿಕೆ ಮತ್ತು ಮಾನವ ಆರೋಗ್ಯ ಎನ್ನುವ ವಿಚಾರದಲ್ಲಿ ಸಾಕ್ಷಿ ಆಧರಿತ ಸಂಶೋಧನೆ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.

ಅಂದಹಾಗೆ ಕಾಸರಗೋಡಿನ(Kasaragodu )ಸಂಸದ ರಾಜ್‌ ಮೋಹನ್‌ ಉಣ್ಣಿತಾನ್‌(Mohan Unnitaan)ಅವರು ಲೋಕಸಭೆಯಲ್ಲಿ ಮಂಗಳವಾರ ಈ ಕುರಿತಾಗಿ ಪ್ರಶ್ನೆ ಒಂದನ್ನು ಕೇಳಿದ್ದರು. ಇದಕ್ಕೆ ಕೇಂದ್ರ ಕೃಷಿ ಸಹಾಯಕ ಸಚಿವ ಭಗೀರಥ್‌ ಚೌಧರಿ ಅವರು ಲಿಖಿತ ಉತ್ತರ ನೀಡಿ ‘ಈ ಸಂಶೋಧನೆಯನ್ನು ವೈದ್ಯಕೀಯ ಅಧ್ಯಯನದಲ್ಲಿ ತೊಡಗಿರುವ 16 ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಸಂಸ್ಥೆಗಳು ಕೈಗೊಳ್ಳಲಿವೆ. ಇದರಲ್ಲಿ ಅಖಿಲ ಭಾರತೀಯ ವೈದ್ಯವಿಜ್ಞಾನ ಸಂಸ್ಥೆ, ವಿಜ್ಞಾನ ಮತ್ತು ಕೈಗಾರಿಕಾ ಸಂಶೋಧನಾ ಸಂಸ್ಥೆ, ಭಾರತೀಯ ವಿಜ್ಞಾನ ಸಂಸ್ಥೆಯೂ ಸೇರಿವೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ’ ಎಂದು ಹೇಳಿದ್ದಾರೆ

ಅಲ್ಲದೆ ಅಡಿಕೆಯನ್ನು ವೀಳ್ಯದೆಲೆ ಜೊತೆಗೆ ಅಥವಾ ಸುವಾಸಿತ ಸುಪಾರಿ ರೂಪದಲ್ಲಿ ತಾಂಬೂಲ ರೂಪದಲ್ಲಿ ಸೇವಿಸಲಾಗುತ್ತದೆ. ಆಯುರ್ವೇದ ಔಷಧಕ್ಕೂ ಬಳಕೆಯಾಗುತ್ತದೆ. ಅದರಲ್ಲಿರುವ ಅಲ್ಕಲಾಯ್ಡ್‌ ಅಂಶದಿಂದ ಇದು ಸಾಧ್ಯವಾಗಿದೆ. ಅಡಿಕೆ ಕೃಷಿಕರು ಪ್ರಸ್ತುತ ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಟನೆಯಿಂದಾಗಿ ಸವಾಲೆದುರಿಸುತ್ತಿರುವುದು ಕೇಂದ್ರ ಸರಕಾರಕ್ಕೆ ಅರಿವಿದೆ. ಡಬ್ಲ್ಯೂಎಚ್‌ಒ ವ್ಯಾಖ್ಯಾನಿಸಿರುವ ವರದಿಗಳಿಗೆ ಹಲವು ಮಿತಿಗಳಿವೆ, ತನ್ಮೂಲಕ ಅವುಗಳ ಉಪಸಂಹಾರ ಅಪೂರ್ಣವಾಗಿವೆ, ಅದಕ್ಕಾಗಿ ಸಮಗ್ರ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಅವರು ಸದನಕ್ಕೆ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರವು ಅಡಿಕೆ ಬೆಳೆಗಾರರ ಜೊತೆ ಸದಾ ಇರುತ್ತದೆ ಎಂಬುದನ್ನು ಅವರು ಅರಿವು ಮಾಡಿಕೊಟ್ಟಿದ್ದಾರೆ.