Home News Hassan: ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ!!

Hassan: ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ!!

Hindu neighbor gifts plot of land

Hindu neighbour gifts land to Muslim journalist

 

Hassan: 2022 ರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ

 

ಹೌದು, 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಸಂಪತ್ ಕುಮಾರ್ ಎಂಬಾತ ಮೊಟ್ತೆ ಎಸೆದಿದ್ದ ಪ್ರಕರಣ ನಡೆದಿತ್ತು. ಇದೀಗ ಈ ಸಂಪತ್ ಕುಮಾರ್ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ.

 

ಅಂದಹಾಗೆ ಸಂಪತ್ ಏಪ್ರಿಲ್ 9ರಂದು ಕೊಡಗಿನ ಕುಶಾಲನಗರದಿಂದ ಸ್ನೇಹಿತನ ಕಾರು ತೆಗೆದುಕೊಂಡು ಹಾಸನಕ್ಕೆ ಬಂದಿದ್ದ. ಏ.10ರಂದು ಸಂಪತ್ ಕುಮಾರ್ ತೆಗೆದ್ಕೊಂಡು ಹೋಗಿದ್ದ ಕಾರು ಹಾಸನ ಜಿಲ್ಲೆಯ ಸಕಲೇಶಪುರದ ಕಲ್ಲಹಳ್ಳಿಬಳಿ ಪತ್ತೆಯಾಗಿತ್ತು. ಕಾರಿನಲ್ಲಿ ರಕ್ತದ ಕಲೆಗಳು ಇದ್ದವು. ಆದರೆ ಸಂಪತ್ ಸುಳಿವು ಇರಲಿಲ್ಲ. ಕುಶಾಲನಗರ ಠಾಣೆಯಲ್ಲಿ ಸಂಪತ್ ಕುಮಾರ್ ನಾಪತ್ತೆ ಕೇಸ್ ದಾಖಲಾಗಿತ್ತು.

 

ಈಗ ಸಂಪತ್ ಕುಮಾರ್ ಮೃತದೇಹ ಕಲ್ಲಹಳ್ಳಿ ಬಳಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಬಳಿಕ ಶವವನ್ನು ಕಾರಿನಲ್ಲಿ ತಂದು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.