Home Breaking Entertainment News Kannada ಸಿನಿಮಾ ಸ್ಟಾರ್ ಗಳ ಸ್ಮಾರಕ ನಿರ್ಮಾಣಕ್ಕೆ ನಟ ಚೇತನ್ ವಿರೋಧ! ಸ್ಮಾರಕ ನಿರ್ಮಾಣದ ಬದಲು ಮ್ಯೂಸಿಯಂ...

ಸಿನಿಮಾ ಸ್ಟಾರ್ ಗಳ ಸ್ಮಾರಕ ನಿರ್ಮಾಣಕ್ಕೆ ನಟ ಚೇತನ್ ವಿರೋಧ! ಸ್ಮಾರಕ ನಿರ್ಮಾಣದ ಬದಲು ಮ್ಯೂಸಿಯಂ ನಿರ್ಮಿಸಿ ಎಂದು ಸರ್ಕಾರಕ್ಕೆ ಮನವಿ!!

Hindu neighbor gifts plot of land

Hindu neighbour gifts land to Muslim journalist

ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ವಿವಾದಗಳನ್ನು ಮೈಮೇಲೆ ಎಳೆದುಕೊಂಡು ಯಾವಾಗಲೂ ಸುದ್ದಿಯಲ್ಲಿರುವುದು ಕನ್ನಡ ನಟ ಚೇತನ್ ಅವರಿಗೆ ಅಭ್ಯಾಸವಾಗಿಬಿಟ್ಟಿದೆ. ಇದೀಗ ಚಲನಚಿತ್ರ ನಟರ ಕುರಿತು ಹೇಳಿಕೊಂದನ್ನು ನೀಡಿ ಸಾಕಷ್ಟು ಟೀಕೆ, ಆಕ್ರೋಶಗಳಿಗೆ ಗುರಿಯಾಗಿದ್ದಾರೆ. ಚಲನಚಿತ್ರ ತಾರೆಯರಿಗೆ ಸಾರ್ವಜನಿಕ ಜಾಗ, ಹಣ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು ಸ್ಮಾರಕ ನಿರ್ಮಾಣ ಮಾಡಬಾರದು ಎಂದು ನಟ ಸಾಮಾಜಿಕ ಹೋರಾಟಗಾರ ಚೇತನ್ ಸರಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ಹಲವಾರು ಕನ್ನಡಿಗರಂತೆಯೇ ನಟ, ನಟಿಯರು ಕೂಡ ಕೆಲಸ ಮಾಡಿ ಸಂಪಾದಿಸುತ್ತಾರೆ. ಈಗಾಗಲೇ ನಮ್ಮ ಸಮಾಜದಲ್ಲಿ ಅವರಿಗೆ ಅನಗತ್ಯ ಪ್ರಚಾರ ನೀಡಿದ್ದೇವೆ. ಅವರು ಸಿನಿಮಾ ಯಶಸ್ಸಿಗೆ ಅನಗತ್ಯವಾಗಿಯೇ ಗಮನ ಸೆಳೆಯುತ್ತಾರೆ. ಹಾಗಾಗಿ ಸ್ಮಾರಕಗಳನ್ನು ಕಟ್ಟದಂತೆ ಅವರು ಮನವಿ ಮಾಡಿದ್ದಾರೆ. ನಾಡಿಗೆ ಬೇಕಾಗಿದ್ದು ಸ್ಟಾರ್ ಗಳ ಸ್ಮಾರಕಗಳ ಬದಲು ಕರ್ನಾಟಕ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವಂತಹ ವಸ್ತು ಸಂಗ್ರಹಾಲಯಗಳು. ನಮ್ಮ ನೆಲ ಸ್ಮಾರಕಗಳಿಗಿಂತ ವಸ್ತು ಸಂಗ್ರಹಾಲಯಗಳಿಗೆ ಬಳಕೆಯಾಗಲಿ ಎಂದು ನಟ ಚೇತನ್ ಆಗ್ರಹಿಸಿದ್ದಾರೆ.

ಸಿನಿಮಾ ರಂಗದ ವಿಚಾರವಾಗಿ ಚೇತನ್ ಈ ಹಿಂದೆಯೇ ಅನೇಕ ಮಾತುಗಳನ್ನು ಆಡಿದ್ದಾರೆ. ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಹೋರಾಟವನ್ನೇ ಅವರು ಕೈಗೆತ್ತಿಕೊಂಡಿದ್ದರು. ನಟ ನಟಿಯರ ತಾರತಮ್ಯದ ಬಗ್ಗೆ ಧ್ವನಿ ಎತ್ತಿದ್ದರು. ಕಾರ್ಮಿಕರ ಕಷ್ಟಗಳ ಕುರಿತು ಮಾತನಾಡಿದ್ದರು. ಇದೀಗ ಸ್ಮಾರಕಗಳ ಬಗ್ಗೆ ಚೇತನ್ ಮಾತನಾಡಿದ್ದಾರೆ. ಜನರ ಹಣವನ್ನು ಈ ರೀತಿಯಾಗಿ ದುಂದುವೆಚ್ಚ ಮಾಡಬೇಡಿ ಎಂದು ಅವರು ಸರಕಾರಕ್ಕೆ ಸಲಹೆ ನೀಡಿದ್ದಾರೆ.

ನಿನ್ನೆಯಷ್ಟೇ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ಉದ್ಘಾಟನೆ ಆಗಿದೆ. ಈ ಬೆನ್ನಲ್ಲೇ ಚೇತನ್ ಇಂತಹ ಮಾತುಗಳನ್ನು ಆಡಿದ್ದಾರೆ. ಇವರ ಮಾತು ಯಾವ ಸ್ವರೂಪ ಪಡೆದುಕೊಳ್ಳುತ್ತದೆಯೋ ಕಾದು ನೋಡಬೇಕಾಗಿದೆ.