ನಟ ದುನಿಯಾ ವಿಜಯ್ ಮತ್ತು ನಾಗರತ್ನ ನಡುವಿನ ದಾಂಪತ್ಯ ಜೀವನಕ್ಕೆ ಹೈಕೋರ್ಟ್ ಇಂದು ತೆರೆ ಎಳೆದಿದೆ. 2024 ರ ಕೌಟುಂಬಿಕ ಕೋರ್ಟ್ ಆದೇಶವನ್ನು ಬದಿಗೊತ್ತಿದ ಹೈಕೋರ್ಟ್ ವಿಚ್ಛೇದನ ಮಂಜೂರು ಮಾಡಿದ್ದು, ಪತ್ನಿಗೆ ಎರಡು ಕೋಟಿ ಜೀವನಾಂಶ ಪಾವತಿಸಲು ದುನಿಯಾ ವಿಜಯ್ಗೆ ಆದೇಶ ನೀಡಿದೆ.

ಈ ಆದೇಶದ ಬೆನ್ನಲ್ಲೇ ಇದೀಗ ದುನಿಯಾ ವಿಜಯ್ ಅವರು ಅಭಿಮಾನಿಗಳಲ್ಲಿ, ಮಾಧ್ಯಮ ಮಿತ್ರರಲ್ಲಿ ಈ ರೀತಿಯಾಗಿ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದಿದ್ದಾರೆ.
ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕಿನುದ್ದಕ್ಕೂ ಜೊತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ…
“ನ್ಯಾಯಾಲಯದ ಆದೇಶಕ್ಕೆ ಶಿರಸಾಷ್ಟಾಂಗ ಪ್ರಣಾಮಗಳೊಂದಿಗೆ ಶರಣಾಗಿದ್ದೇನೆ. ಕಾನೂನಿನ ಮೇಲಿನ ನಂಬಿಕೆ ಮತ್ತಷ್ಟು ಹೆಚ್ಚಾಗಿದೆ. ನ ನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಡಿ.ಕೆ. ಸಿಂಗ್ ಹಾಗೂ ಶ್ರೀ ಶಾಂತಿಭೂಷಣ್ ಅವರ ಆದೇಶಕ್ಕೆ ತಲೆಬಾಗಿದ್ದೇನೆ. ಈ ಆದೇಶಕ್ಕೆ ನನ್ನ ಗೌರವಪೂರ್ವಕ ಧನ್ಯವಾದಗಳು. ಹಾಗೆಯೇ ನನ್ನ ವಕೀಲರಾದ ಹಿರಿಯ ಕೌನ್ಸಿಲ್ ಶ್ರೀವತ್ಸ ಹಾಗೂ ಯುಕ್ತ ಅನಿಲ್ ಅವರಿಗೆ ನನ್ನ ಹೃತ್ತೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.”
ಈ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಾಧ್ಯಮಗಳಲ್ಲಾಗಲಿ ಅಥವಾ ಸಾರ್ವಜನಿಕವಾಗಲಿ ಮಾತನಾಡಲು ಇಚ್ಛಿಸುವುದಿಲ್ಲ.
ನನ್ನ ಹೆಣ್ಣುಮಕ್ಕಳು ವಯಸ್ಕರಾಗಿದ್ದು, ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನ ಗಳಿಸಿದ್ದಾರೆ; ಅವರಿಗೆ ಯಾವುದೇ ಮುಜುಗರವಾಗಬಾರದು. ಮಕ್ಕಳ ಭವಿಷ್ಯ ಹಾಗೂ ಹಿತದೃಷ್ಟಿಯಿಂದ, ನನ್ನ ವೈಯಕ್ತಿಕ ಸಾಂಸಾರಿಕ ವಿಚಾರಕ್ಕೆ ನ್ಯಾಯಾಲಯ ನೀಡಿದ ಆದೇಶವನ್ನು ಆತ್ಮಸಾಕ್ಷಿಯಿಂದ ಸ್ವೀಕರಿಸಿದ್ದು.
https://www.facebook.com/share/199thSNUmT/

