Home News Swine flu: ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ: 100 ಹಂದಿಗಳು ಸಾವು, 57 ಹಂದಿಗಳನ್ನು...

Swine flu: ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ: 100 ಹಂದಿಗಳು ಸಾವು, 57 ಹಂದಿಗಳನ್ನು ಸಾಯಿಸಲು ನಿರ್ಧಾರ

Hindu neighbor gifts plot of land

Hindu neighbour gifts land to Muslim journalist

Swine flu: ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ 57 ಹಂದಿಗಳನ್ನು ಸಾಯಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಹಂದಿ ಫಾರ್ಮ್‌ನಲ್ಲಿ ಆಗಸ್ಟ್ 19ರಿಂದ ಇಲ್ಲಿಯವರೆಗೂ 100 ಹಂದಿಗಳು ಸಾವನ್ನಪ್ಪಿವೆ.

ಇದರಿಂದ ಎಚ್ಚೆತ್ತ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು. ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಂದಿಗಳ ರಕ್ತದ ಸ್ಯಾಂಪಲ್ ಅನ್ನು ಭೋಪಾಲ್‌ನ ರಾಷ್ಟ್ರೀಯ ಲ್ಯಾಬ್‌ಗೆ ಕಳುಹಿಸಿದ್ದರು. ಲ್ಯಾಬ್ ವರದಿಯಲ್ಲಿ ಆಫ್ರಿಕನ್ ಹಂದಿ ಜ್ವರ ದೃಢಪಟ್ಟಿದೆ.

ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ರಂಗಪ್ಪ ಅವರು ಪ್ರತಿಕ್ರಿಯಿಸಿ, “ಕಳೆದೊಂದು ವಾರದಿಂದ ಫಾರ್ಮ್ನಲ್ಲಿ ಹಂದಿಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಲಾಗಿತ್ತು. ಹಂದಿ ಜ್ವರ ದೃಢಪಟ್ಟ ಕಾರಣ ಸದ್ಯ ಫಾರ್ಮ್ನಿಂದ ಹಂದಿಗಳ ಸಾಗಟವನ್ನು ನಿಷೇಧಿಸಲಾಗಿದೆ.

ಆಫ್ರಿಕನ್ ಹಂದಿ ಜ್ವರ ಒಂದು ಸಾಂಕ್ರಾಮಿಕ ರೋಗ. ಹೆಚ್ಚಾಗಿ ದೇಶೀಯ ಮತ್ತು ಕಾಡು ಹಂದಿಗಳಿಗೆ ಈ ರೋಗ ಹರಡುತ್ತದೆ. ರೋಗಕ್ಕೆ ತುತ್ತಾದ ಹಂದಿಗಳು ಸಾವನ್ನಪ್ಪುತ್ತವೆ. ಸದ್ಯಕ್ಕೆ ಈ ಜ್ವರಕ್ಕೆ ನಿರ್ದಿಷ್ಟ ಔಷಧಿ ಹಾಗೂ ಚಿಕಿತ್ಸೆ ಇಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಜ್ವರ ದೃಢಪಟ್ಟ ಸ್ಥಳದಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಲ್ಲಲಾಗುತ್ತದೆ. ಸೋಂಕಿತ ಹಂದಿಗಳಿಂದ ಮನುಷ್ಯನಿಗೆ ರೋಗ ಹರಡುವುದಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

Govt School: ದಕ್ಷಿಣ ಕನ್ನಡದಲ್ಲಿ ಕುಂಠಿತಗೊಂಡ ಮಕ್ಕಳ ಶಾಲಾ ದಾಖಲಾತಿ – ಮುಚ್ಚುವ ಭೀತಿಯಲ್ಲಿ 90 ಶಾಲೆಗಳು