Home News Suicide: ಪರೀಕ್ಷೆಯಲ್ಲಿ ನಕಲು ಆರೋಪ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Suicide: ಪರೀಕ್ಷೆಯಲ್ಲಿ ನಕಲು ಆರೋಪ: ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Hindu neighbor gifts plot of land

Hindu neighbour gifts land to Muslim journalist

 

Suicide:ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಮುಧೋಳ (Mudhol) ನಗರದಲ್ಲಿ ನಡೆದಿದೆ.

ತೇಜಸ್ವಿನಿ ದೊಡ್ಡಮನಿ ಮುಧೋಳ ನಗರದ ಶಾರದಾ ಖಾಸಗಿ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಸೈನ್ಸ್ ಓದುತ್ತಿದ್ದಳು. ಫೆಬ್ರವರಿ 27 ರಂದು ರಸಾಯನಶಾಸ್ತ್ರ ವಿಷಯದ ವಾರ್ಷಿಕ ಪರೀಕ್ಷೆ ನಡೆಯಿತು. ಪರೀಕ್ಷೆಯಲ್ಲಿ ತೇಜಸ್ವಿನಿ ನಕಲು ಮಾಡುವುದನ್ನು ಕಂಡ ಕಾಲೇಜು ಸಿಬ್ಬಂದಿ ಪ್ರಶ್ನೆ ಮಾಡಿದರು.

ಈ ವಿಚಾರವನ್ನು ತೇಜಸ್ವಿನಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಬಳಿಕ, ಪೋಷಕರು ಫೆಬ್ರವರಿ 28 ರಂದು ಕಾಲೇಜಿಗೆ ಬಂದು, ನಕಲು ಮಾಡಿದ್ದಕ್ಕೆ ಸಾಕ್ಷಿ ಕೇಳಿದ್ದರು. ಆಗ ಕಾಲೇಜು ಸಿಬ್ಬಂದಿ ಸಿಸಿ ಕ್ಯಾಮೆರಾ ದೃಶ್ಯ ತೋರಿಸಲು ಮುಂದಾದರು. ಅಲ್ಲದೇ, ಕಾಲೇಜು ಸಿಬ್ಬಂದಿ ಪೋಷಕರ ಸಮ್ಮುಖದಲ್ಲಿ ತೇಜಸ್ವಿನಿಗೆ ಬುದ್ದಿವಾದ ಹೇಳಿದ್ದಾರೆ.

ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪೋಷಕರು ಮುಧೋಳ ಪೊಲೀಸ್‌ ಠಾಣೆಯಲ್ಲಿ ಕಾಣೆಯಾದ ದೂರು ದಾಖಲಿಸಿದರು.